ಬ್ರಹ್ಮಾವರ ತಾಲೂಕಿನ ಹಾರಾಡಿ ಹಾಗೂ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಉಪ ಚುನಾವಣೆಯ ಸಂಬಂಧ, ಜುಲೈ 21 ರ ಸಂಜೆ 5 ಗಂಟೆಯಿಂದ ಜುಲೈ 23 ರ ಸಂಜೆ 5 ಗಂಟೆಯವರಿಗೆ ಸದ್ರಿ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ಒಣದಿನ (Dry Day) ಗಳೆಂದು ಘೋಷಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್‌ಗಳನ್ನು, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ ಕೆ.ವಿದ್ಯಾ ಕುಮಾರಿ ಆದೇಶಿಸಿದ್ದಾರೆ.