ಬ್ರಹ್ಮಾವರ, ಜ.13: ಉಪ್ಪೂರು ಗ್ರಾಮದ ಕೆ.ಜಿ.ರೋಡ್ನ ರಾ.ಹೆ-66ರಲ್ಲಿ ಇಂದು ಬೆಳಗ್ಗೆ ಮಹೀಂದ್ರ ಬುಲೆರೋ ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕೆ.ಜಿ.ರೋಡ್ ನಿವಾಸಿ ಜಯಲಕ್ಷ್ಮೀ ಭಟ್ ಎಂದು ಗುರುತಿಸ ಲಾಗಿದೆ. ಇವರು ಬ್ರಹ್ಮಾವರ ಕಡೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬುಲೆರೋ ಜೀಪು ಡಿಕ್ಕಿ ಹೊಡೆಯಿತು.ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಇವರು, ಮಣಿಪಾಲ ಆಸ್ಪತ್ರೆಯಲ್ಲಿ ಮಧ್ಯಾಹ್ನ 12:45ರ ಸುಮಾರಿಗೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.