ಭಾರತ ಹಿಂದೂ ರಾಷ್ಟ್ರ, ಹಿಂದೂ ಸಂಸ್ಕೃತಿಯ ಹಿನ್ನೆಲೆಯ ಆಧಾರದಲ್ಲೇ ರಾಷ್ಟ್ರವನ್ನು ಮತ್ತಷ್ಟು ಸಬಲಗೊಳಿಸುತ್ತೇವೆ – ಸಚಿವ ಸುನೀಲ್ ಕುಮಾರ್

ಉಡುಪಿ: ಕಳೆದ 18 ವರ್ಷಗಳಿಂದ ನಾಡಗೀತೆಯ ಬಗ್ಗೆ ಸ್ಪಷ್ಟನೆ ಇರಲಿಲ್ಲ. ರಾಗ ಸಂಯೋಜನೆ ಮತ್ತು ಸಮಯ ನಿಗದಿಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು. ಬಿಜೆಪಿ ನೇತೃತ್ವದ ಬೊಮ್ಮಾಯಿ ಸರ್ಕಾರ ಸ್ಪಷ್ಟ ನಿಲುವಿಗೆ ಬಂದಿದೆ. ಎಸ್. ಆರ್ ಲೀಲಾವತಿ ಸಮಿತಿ ಸರಕಾರಕ್ಕೆ ಶಿಫಾರಸು ಮಾಡಿದೆ. ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಲ್ಲಿ 2. 30 ಸೆಕೆಂಡ್ ನಲ್ಲಿ ನಾಡಗೀತೆ ಅಂತಿಮವಾಗಿದೆ.ಕುವೆಂಪು ಬರೆದ ನಾಡ ಗೀತೆಯಲ್ಲಿ ಯಾವುದೇ ಶಬ್ದವನ್ನು ಕಡಿತ ಮಾಡಿಲ್ಲ.ಕನ್ನಡ ಸಂಸ್ಕೃತಿ ಇಲಾಖೆ ಒಪ್ಪಿ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ ಎಂದು ನಾಡಗೀತೆ ಸಮಯ ನಿಗದಿ ವಿಚಾರದಲ್ಲಿ ಉಡುಪಿಯಲ್ಲಿ ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದರು.

ನಾಡಗೀತೆ ಕರ್ನಾಟಕದ ಅಸ್ಮಿತೆಯ ಪ್ರಶ್ನೆ. ಈ ಹಿಂದೆ ಆರೇಳು ನಿಮಿಷಗಳ ವರೆಗೆ ನಾಡಗೀತೆಯನ್ನು ಹಾಡಲಾಗುತ್ತಿತ್ತು.ಸಾಂಸ್ಕೃತಿಕ ಲೋಕದಲ್ಲಿ ಸಾಹಿತ್ಯ ವಲಯದಲ್ಲಿ ಸದಾಭಿಪ್ರಾಯ ಬಂದಿದೆ. ಬರಗೂರು ರಾಮಚಂದ್ರಪ್ಪರಿಂದ ಭೈರಪ್ಪ ನವರು ಸೇರಿದಂತೆ ಎಲ್ಲ ಸಾಹಿತಿಗಳು ಒಪ್ಪಿದ್ದಾರೆ ಅವರಿಗೆ ಅಭಿನಂದನೆ ಎಂದು ಹೇಳಿದರು.

ದೇಶಾದ್ಯಂತ ಎನ್ಐಎ ದಾಳಿ ವಿಚಾರ;

ಪಿಎಫ್ ಐ ಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಗ್ಗು ಬಡಿಯುತ್ತದೆ. ಭಾರತವನ್ನು ದುರ್ಬಲಗೊಳಿಸುವ ಪ್ರಯತ್ನ ಯಾರು ಮಾಡಬಾರದು.ಬಂಧಿತ ವ್ಯಕ್ತಿಗಳು ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಕನಸು ಕಂಡಿದ್ದಾರೆ.ಜಗತ್ತಿನ ಯಾವುದೇ ರಾಷ್ಟ್ರ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡಲು ಸಾಧ್ಯವಿಲ್ಲ ಎಂದರು.

ಭಾರತ ಹಿಂದೂ ರಾಷ್ಟ್ರ ಹಿಂದೂ ಸಂಸ್ಕೃತಿಯ ಹಿನ್ನೆಲೆಯಲ್ಲಿ ಆಧಾರದಲ್ಲೇ ರಾಷ್ಟ್ರವನ್ನು ಮತ್ತಷ್ಟು ಸಬಲಗೊಳಿಸುತ್ತೇವೆ.ಜನರು ಕೂಡ ಇದಕ್ಕೆ ಬೆಂಬಲವನ್ನ ಕೊಡಬೇಕು ಎಂದರು.

ಪ್ರವೀಣ್ ನೆಟ್ಟಾರು ಹತ್ಯೆಯಾದಾಗ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದಾಗಿ ಹೇಳಿದ್ದೆ. ಕಾರ್ಯಕರ್ತರಿಗೆ ನ್ಯಾಯ ಕೊಡುವ ಭರವಸೆಯನ್ನ ನೀಡಿದ್ದೆವು. ಪ್ರಕರಣವನ್ನು NIA ಗೆ ಕೊಟ್ಟು ಸರ್ಕಾರ ಕೈ ಕಟ್ಟಿ ಕುಳಿತಿಲ್ಲ.

ಸಿದ್ದರಾಮಯ್ಯ ಕಾಲದಲ್ಲಿ ಎಸ್ ಡಿ ಪಿ ಐ, ಪಿ ಎಫ್ ಪೋಷಿಸಿದ್ದರು.ಸಿದ್ದರಾಮಯ್ಯ ಕಾಲದಲ್ಲಿ 18 ಹಿಂದೂಗಳ ಹತ್ಯೆಯಾಗಿತ್ತು. ಆರೋಪಿಗಳ ಕೇಸನ್ನು ಸಿದ್ದರಾಮಯ್ಯ ಸರ್ಕಾರ ವಾಪಸ್ ಪಡೆದಿತ್ತು.ಅಶಾಂತಿ ಸೃಷ್ಟಿಸಿರುವ ಅವರ ವಿರುದ್ಧ ಕಾಂಗ್ರೆಸ್ ಸ್ನೇಹ ಬೆಳೆಸಿತ್ತು.ಭಾರತದ ಭದ್ರತೆಯನ್ನು ಕಾಪಾಡುವುದು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಲುವು ಎಂದು ಅವರು ಸೇರಿಸಿದರು.

ಕಾಂಗ್ರೆಸ್ ನಿಂದ ಪೇ ಸಿಎಂ ಅಭಿಯಾನ ವಿಚಾರ;

ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿದೆ. ಪೇ ಸಿಎಂ ಎಂಬುದು ಕಾಂಗ್ರೆಸ್ನ ಸುಳ್ಳಿನ ಸುರಿಮಳೆ. ಪೋಸ್ಟರ್ ಅಂಟಿಸಿದ ಡಿಕೆಶಿ ಇಡಿ ಕಚೇರಿಗೆ ಹೋಗಿದ್ದು ಯಾಕೆ?.ಈ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ಕೊಡಬೇಕು. ಭ್ರಷ್ಟಾಚಾರದ ಬಗ್ಗೆ ವಿಚಾರಣೆಗೆ ಒಳಗಾಗಿ ಪೇಟಿಎಂ ಪೋಸ್ಟರ್ ಹಚ್ಚಿದ್ದಾರೆ. ಕಾಂಗ್ರೆಸಿಗೆ ಪೇ ಸಿಎಂ ಪೋಸ್ಟರ್ ಅಂಟಿಸಲು ಯಾವ ನೈತಿಕತೆ ಇದೆ
ಅರ್ಕಾವತಿ ಇಂದಿರಾ ಕ್ಯಾಂಟೀನ್ ಹಾಸಿಗೆಯಲ್ಲಿ ಹಣ ನುಂಗಿದವರು ಕಾಂಗ್ರೆಸ್ಸಿಗರು.

ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ ಭ್ರಷ್ಟಾಚಾರದ ಉತ್ತುಂಗ ಏರಿಸಿದ ಕಾಂಗ್ರೆಸ್ಸಿಗರು ನಮ್ಮ ಕಾಮನ್ ಸಿಎಂ ಬಗ್ಗೆ ಮಾತನಾಡುತ್ತಾರೆ. ಭ್ರಷ್ಟಾಚಾರ ನಡೆದಿದ್ದರೆ ನ್ಯಾಯಾಲಯ ಮುಖ್ಯಮಂತ್ರಿಗಳು ಲೋಕಾಯುಕ್ತಕ್ಕೆ ದೂರು ಕೊಡಿ 10 ದಿನದ ಅಧಿವೇಶನದಲ್ಲಿ ಭ್ರಷ್ಟಾಚಾರದ ಬಗ್ಗೆ ಒಂದು ದಿನವು ಚರ್ಚೆ ನಡೆದಿಲ್ಲ ಎಂದು
ಉಡುಪಿಯಲ್ಲಿ ಇಂಧನ ಕನ್ನಡ ಸಂಸ್ಕೃತಿ ಸುನಿಲ್ ಕುಮಾರ್ ಹೇಳಿದರು.

ನೀವು ಭ್ರಷ್ಟಾಚಾರದ ಆರೋಪ ಮಾಡುತ್ತಿರಿ
ನಾವು ನಮ್ಮ ಕಾರ್ಯಕ್ರಮ ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತೇವೆ ಎಂದರು.

ವಿದ್ಯುತ್ ನ ಬಿಲ್ ಏರಿಕೆ ವರ್ಷಕ್ಕೆ ಒಂದು ಬಾರಿ ನಡೆಯುತ್ತದೆ. ಕಲ್ಲಿದ್ದಲು ಬೆಲೆ ಏರಿಕೆಗೆ ಹೊಂದಾಣಿಕೆ ಮಾಡಿ ವಿದ್ಯುತ್ ದರ ನಿಗದಿಯಾಗುತ್ತದೆ. ಕಳೆದ 9 ವರ್ಷಗಳಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಕಲ್ಲಿದ್ದಲು ದರ ನಿಗದಿಯಾಗುತ್ತದೆ.ಕಲ್ಲಿದ್ದಲು ಬೆಲೆ ಹೊಂದಾಣಿಕೆ ಗೋಸ್ಕರ ಬೆಲೆ ಏರಿಕೆ ಮಾಡಿದ್ದಾರೆ.

ಅವಧಿ ಪೂರ್ವ ಚುನಾವಣೆ ರಾಜ್ಯದಲ್ಲಿ ಇಲ್ಲ. ನಿಗದಿತ ಸಮಯದಲ್ಲಿ ಚುನಾವಣೆ ಆಗುತ್ತದೆ. ಬಿಜೆಪಿ ಮತ್ತೊಮ್ಮೆ ಸರ್ಕಾರವನ್ನು ರಚನೆ ಮಾಡುತ್ತದೆ. ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ.ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕೂಡ ಬಸವರಾಜ್ ಬೊಮ್ಮಾಯಿ ಎಂದರು.

ಬೊಮ್ಮಾಯಿ ಮುಂದಿನ ಚುನಾವಣೆ ನೇತೃತ್ವ ವಹಿಸುತ್ತಾರೆ ಎಂದು ಜೆಪಿ ನಡ್ಡ ಅವರೇ ಹೇಳಿದ್ದಾರೆ.ನಾವೆಲ್ಲರೂ ಅದಕ್ಕೆ ಸಹಮತ ವ್ಯಕ್ತಪಡಿಸಿದ್ದೇವೆ ನಮ್ಮಲ್ಲಿ ಗೊಂದಲ ಇಲ್ಲ.ನಾವು ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ
ನಮ್ಮ ಇವತ್ತಿನ ಕ್ಯಾಪ್ಟನ್ ಬಸವರಾಜ ಬೊಮ್ಮಾಯಿ
ಕ್ಯಾಪ್ಟನ್ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹೋಗುತ್ತೇವೆ.ನವರಾತ್ರಿ ನಂತರ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ.

Latest Indian news

Popular Stories

Social Media Auto Publish Powered By : XYZScripts.com
error: Content is protected !!