ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದ್ದು, ಆರೋಪಿ ಶಾಸಕ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಮಾಡಾಳ್ ವಿರೂಪಾಕ್ಷ ಅವರು, ಸುಮಾರು 15 ದಿನಗಳ ಜೈಲು ವಾಸದ ಬಳಿ ಇಂದು ಸಂಜೆ ಬಿಡುಗಡೆಯಾಗಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮಾಡಾಳ್, ಭಾರತದ ನ್ಯಾಯಾಂಗದ ಬಗ್ಗೆ ನನಗೆ ವಿಶ್ವಾಸದೆ. ಈ ಆರೋಪದಿಂದ ನಾನು ಮುಕ್ತನಾಗುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಮುಂದಿನ ರಾಜಕೀಯ ನಡೆ ಬಗ್ಗೆ ಪ್ರತಿಕ್ರಿಯಿಸಿದ ಮಾಡಾಳ್, ನಾನು ಈಗ ಏನನ್ನ ಹೇಳುವ ಪರಿಸ್ಥಿತಿಯಲ್ಲಿಲ್ಲ. ಹೊರಗಡೆ ಏನು ನಡೆದಿದೆ ಎಂಬುದರ ಅರಿವು ನನಗೆ ಇಲ್ಲ. ಮನೆಗೆ ಹೋಗಿ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.