ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ783 ಮಂದಿಯ ರೌಡಿ ಶೀಟ್ ತೆರವು

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ783 ಮಂದಿಯ ರೌಡಿ ಶೀಟ್ ತೆರವು ಮಾಡಲಾಯಿತು.

ಮಂಗಳೂರಿನ ರೋಶನಿ ನಿಲಯ ಕಾಲೇಜಿನಲ್ಲಿ ನಡೆದ ಮಂಗಳೂರು ನಗರ ಪೊಲೀಸ್ ಪರಿವರ್ತನಾ ಸಭೆಯಲ್ಲಿ ಕಮಿಷನರ್ ಎನ್.ಶಶಿಕುಮಾರ್ ಈ ಬಗ್ಗೆ ಮಾಹಿತಿ ನೀಡಿದರು.

ಕಮಿಷನರೇಟ್ ವ್ಯಾಪ್ತಿಯ ಎಲ್ಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳು ಇದರಲ್ಲಿ ಸೇರಿದ್ದಾರೆ. ಈ ವ್ಯಾಪ್ತಿಯಲ್ಲಿ ಒಟ್ಟು 2305 ಮಂದಿ ರೌಡಿಗಳಿದ್ದಾರೆ. ಅದರಲ್ಲಿ 783 ಮಂದಿಯ ರೌಡಿ ಶೀಟ್ ತೆರವು ಮಾಡಲಾಗಿದೆ. ಇನ್ನೂ 1522 ಮಂದಿ ರೌಡಿ ಶೀಟರ್ ಗಳಿದ್ದಾರೆ.

ಕಳೆದ ವರ್ಷ ಒಂದು ಸಾವಿರಕ್ಕೂ ಅಧಿಕ ಮಂದಿಯ ರೌಡಿ ಶೀಟ್ ತೆರವುಗೊಳಿಸಲಾಗಿತ್ತು.

ಮುಂದೆ ಸಮಾಜದಲ್ಲಿ ಉತ್ತಮ‌ ವ್ಯಕ್ತಿಗಳಾಗಿ ಬದುಕಲು ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು, ಅಪರಾಧ ಪ್ರಕರಣಗಳನ್ನ ತಡೆಯಲು ನೆರವಾಗಲು ಎನ್.ಶಶಿಕುಮಾರ್ ಸೂಚನೆ ನೀಡಿದರು.

Latest Indian news

Popular Stories