ಮಂಗಳೂರು: ನೆಹರು ಮೈದಾನದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ – ಕೊಲೆ ಶಂಕೆ

ಮಂಗಳೂರು: ನಗರದ ನೆಹರು ಮೈದಾನದಲ್ಲಿ ಮಂಗಳವಾರ ಸಂಜೆ 45 ವರ್ಷದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಇದೊಂದು ಕೊಲೆ ಎಂದು ಶಂಕಿಸಿದ್ದಾರೆ.

ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ನಿವಾಸಿ ಜನಾರ್ದನ ಪೂಜಾರಿ ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಈ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ನಂತರ ನಾಲ್ವರು ಕೊಲೆಯ ಶಂಕಿತ ಪಟ್ಟಿಯಲ್ಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Latest Indian news

Popular Stories