ಮಂಗಳೂರು : ಜ 1 : ರಜೆಯ ನಿಮಿತ್ತ ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಜ 1 ರಂದು ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‌ಎಫ್ ಯೋಧ ಹರೀಶ್ ಕುಮಾರ್ (43) ಮೃತಪಟ್ಟವರು.
ತನ್ನ 22ನೇ ವಯಸ್ಸಿನಲ್ಲಿ ದೇಶದ ಗಡಿ ರಕ್ಷಣೆಗೆ ತೆರಳಿದ್ದ ಹರೀಶ್ ಕುಮಾರ್ ಅವರು ಇತ್ತೀಚೆಗೆ ರಜೆಯಲ್ಲಿ ಊರಿಗೆ ಬಂದಿದ್ದರು. ಡಿ. 31 ಹೃದಯಾಘಾತವಾಗಿದ್ದು, ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಜ.1ರಂದು ಚಿಕತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಅವರು ಸರಿ ಸುಮಾರು 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಮೃತರು ಪತ್ನಿ, 6 ವರ್ಷದ ಪುತ್ರ ಹಾಗೂ ಒಂದುವರೆ ವರ್ಷದ ಪುತ್ರಿಯನ್ನು ಅಗಲಿದ್ದಾರೆ.