ಮಂಡಲದ ವಿರುದ್ಧ ಕಮಂಡಲ ಹಿಡಿದ ಬಿಜೆಪಿ ನಾಯಕರ ಹಿಪಾಕ್ರಸಿ ಕೊನೆಯಿಲ್ಲದ ಧಾರಾವಾಹಿ – ಸಿದ್ದರಾಮಯ್ಯ

ಬೆಂಗಳೂರು: ‘ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದು’ ಎನ್ನುವ ಮಂತ್ರ.‌ ಅಂತರಂಗದಲ್ಲಿ‌ ಜಾತಿಗಳನ್ನು ಒಡೆದು ಆಳುವ ಕುತಂತ್ರ. ಮಂಡಲ ವಿರುದ್ಧ ಕಮಂಡಲ‌ ಹಿಡಿದ ಬಿಜೆಪಿ ನಾಯಕರ ಜಾತಿ‌ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು‌ ಕೊನೆಯಿಲ್ಲದ ಧಾರವಾಹಿ ಆದೀತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಸರಣಿ ಟ್ವೀಟ್‌ಗಳಿಗೆ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ. ಬಾಯಲ್ಲಿ ನಾವೆಲ್ಲ ಒಂದು, ನಾವೆಲ್ಲ ಹಿಂದೂ’ ಎನ್ನುವ ಮಂತ್ರ.‌ ಅಂತರಂಗದಲ್ಲಿ‌ ಜಾತಿಗಳನ್ನು ಒಡೆದು ಆಳುವ ಕುತಂತ್ರ.ಮಂಡಲ ವಿರುದ್ಧ ಕಮಂಡಲ‌ ಹಿಡಿದ ಬಿಜೆಪಿ ನಾಯಕರ ಜಾತಿ‌ ಹಿಪಾಕ್ರಸಿಯನ್ನು ಬಿಚ್ಚಿಟ್ಟರೆ ಅದೊಂದು‌ ಕೊನೆಯಿಲ್ಲದ ಧಾರವಾಹಿ ಆದೀತು ಎಂದಿದ್ದಾರೆ.

ಕುರುಬ ಸಮಾವೇಶ ನಡೆಸಿದ್ದ ಈಶ್ವರಪ್ಪ, ಪಂಚಮಸಾಲಿ ಲಿಂಗಾಯತರ ಸಮಾವೇಶ ನಡೆಸಿದ ಯತ್ನಾಳ್, ಬ್ರಾಹ್ಮಣ ಸಮಾವೇಶದಲ್ಲಿ‌ ಪಾಲ್ಗೊಂಡ ಜೋಷಿ, ಕಾಗೇರಿ, ಸುರೇಶ್ ಕುಮಾರ್, ಒಕ್ಕಲಿಗನೆಂಬ ಕಾರಣಕ್ಕೆ ಸಚಿವನಾದೆ ಎನ್ನುವ ಆರ್.‌ಅಶೋಕ್ ಜಾತಿವಾದಿಗಳಾ? ಜಾತ್ಯತೀತರಾ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಲಿಂಗಾಯತ ಸ್ವಾಮಿಗಳನ್ನು ಮನೆಗೆ ಕರೆಸಿ ದುಡ್ಡು ಹಂಚಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಾತಿವಾದಿಯೇ? ಜಾತ್ಯತೀತವಾದಿಯೇ? ಶೋಷಿತ ಜಾತಿಗಳ ಸಮಾವೇಶದಲ್ಲಿ ನಾನು ಭಾಗವಹಿಸಿದರೆ ಜಾತಿವಾದಿ, ನೀವು ಭಾಗವಹಿಸಿದರೆ‌ ಜಾತ್ಯತೀತರಾ?

ಜಾತಿ ಸಮಾವೇಶದಲ್ಲಿ‌ ಭಾಗವಹಿಸುವುದಿಲ್ಲ ಎಂದು ಬಿಜೆಪಿ ನಾಯಕರು ಪ್ರಮಾಣ ಮಾಡಲಿ, ನಾನು ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಆತ್ಮವಂಚನೆ ಬಿಟ್ಟು ಪ್ರಾಮಾಣಿಕ ರಾಜಕೀಯ ಮಾಡಿ.ಟಿಪ್ಪು ಸುಲ್ತಾನ್ ಜಯಂತಿ‌ಯಲ್ಲಿ ನಾನು ಭಾಗವಹಿಸಿದರೆಹಿಂದೂ ವಿರೋಧಿ. ಟಿಪ್ಪು ಬಗ್ಗೆ ಸರ್ಕಾರದಿಂದಲೇ ಪುಸ್ತಕ‌ ಪ್ರಕಟಿಸಿ ಹಾಡಿ ಹೊಗಳಿದ ಮಾಜಿ‌ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಸ್ಲಿಂ ಗಣವೇಷ ಹಾಕಿ‌ ಖಡ್ಗ ಹಿಡಿದು ಕುಣಿದ ಬಿ.ಎಸ್ ಯಡಿಯೂರಪ್ಪ, ಆರ್. ಅಶೋಕ್ ಹಿಂದೂಕುಲ ತಿಲಕರೇ?

ಜಾತಿ ನಾಶವಾಗುವ ವರೆಗೆ ಮೀಸಲಾತಿ ಇರಬೇಕೆಂಬ ನನ್ನ ಮಾತಿಗೆ ನಾನೀಗಲೂ ಬದ್ಧ. ಮಂಡಲ್ ವರದಿ ವಿರೋಧಿಸಿ ಮೈಗೆ ಬೆಂಕಿ ಹಚ್ಚಿಕೊಂಡಿದ್ದ ಬಿಜೆಪಿ ನಾಯಕರೇ ಈಗ ನಿಮಗೆ ಮೀಸಲಾತಿ ವಿರೋಧಿಸುವ ತಾಕತ್ ಇದೆಯೇ? ಅಂದ ಹಾಗೆ ಬಿಜೆಪಿ ನಾಯಕರೇ, ನಿಮ್ಮ‌ ಮಾತೃ ಸಂಸ್ಥೆಯಾದ ಆರ್ ಎಸ್ ಎಸ್ ಗೆ ಚುನಾವಣೆ ಇಲ್ಲದೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ? ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ ಎಲ್ಲ ಜಾತಿಗಳಿಗೆ ಸೇರಿದವರು ಇರುವುದು ಯಾಕೆ? ಎಂದು ಬಿಜೆಪಿಗೆ ಟಾಂಗ್ ನೀಡಿದ್ದಾರೆ.

Latest Indian news

Popular Stories

error: Content is protected !!