ಮಂಡ್ಯದಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 40 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಂಡ್ಯ : ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಗೋಡು ಬಳಿ ನಡೆದಿದೆ

40 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಬಸ್ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಗೋಡು ಬಳಿ ಪಲ್ಟಿ ಹೊಡೆದಿದೆ.

ಅದೃಷ್ಟವಶಾತ್ 40 ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ವೇಗವಾಗಿ ಬರುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಗಾಯಾಳುವಿಗೆ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ

Latest Indian news

Popular Stories