ಮಡಿಕೇರಿ, ಜ.14. ತಾಯಿಯ ಪ್ರಾಣ ಉಳಿಸಿದ ಮೂರನೇ ತರಗತಿಯ ಬಾಲಕ ದೀಕ್ಷಿತ್ ಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಗರಿಮೆ ಸಿಕ್ಕಿದ್ದು, ಜ.26ರಂದು ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ವಿತರಣ ಸಮಾರಂಭದಲ್ಲಿ ದೀಕ್ಷಿತ್ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಸ್ವೀಕರಿಸಲಿದ್ದಾನೆ ಎಂದು ತಿಳಿದುಬಂದಿದೆ.
ದೀಕ್ಷಿತ್ ತಾಯಿ ಅರ್ಪಿತಾ ಕೂಡೂರು ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ಅಕ್ಕಿ ಪುಡಿ ಮಾಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗಿರಣಿಯ ಬೆಲ್ಟ್ ಗೆ ಅವರ ತಲೆ ಸಿಲುಕಿಕೊಂಡು ಜೋರಾಗಿ ಕಿರುಚಿಕೊಂಡಿದ್ದರು. ಅಲ್ಲೇ ಆಟವಾಡುತ್ತಿದ್ದ ಬಾಲಕ ತಾಯಿಯ ಕೂಗು ಕೇಳಿಸಿಕೊಂಡು ಓಡಿ ಬಂದು ಗಿರಣಿಯ ವಿದ್ಯುತ್ ಸರಬರಾಜಿನ ಸ್ವಿಚ್ ಆಫ್ ಮಾಡಿ ತಾಯಿಯನ್ನು ರಕ್ಷಿಸಿದ್ದಾನೆ. ಬಾಲಕನ ಸಮಯಪ್ರಜ್ಞೆ ವ್ಯಾಪಕ ಮೆಚ್ಚುಗೆಗೆ ಕಾರಣವಾಗಿತ್ತು ಎಂದು ವರದಿ ತಿಳಿಸಿದೆ.