ಮಡಿಕೇರಿ: ದೇವಪ್ಪಂಡ ಕುಟ್ಟಪ್ಪ ಸ್ಮರಣಾರ್ಥ ಶಾಂತಿ ಸಭೆ – ಹಿಂದೂ ಸಂಘಟನೆಯ ಮುಖಂಡನ ಬಂಧನ

ಮೈಸೂರು: ಟಿಪ್ಪು ಜಯಂತಿ ವೇಳೆ ಮಡಿಕೇರಿ ನಗರದಲ್ಲಿ ನಡೆದ ಘರ್ಷಣೆಯ ಸಂದರ್ಭದಲ್ಲಿ ಮೃತಪಟ್ಟ ವಿಶ್ವಹಿಂದೂ ಪರಿಷತ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೇವಪ್ಪಂಡ ಕುಟ್ಟಪ್ಪ ಸ್ಮರಣೆಯನ್ನು ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಮಾಡುತ್ತಿದ್ದು, ಈ ಸಂಬಂಧ ವಿವಿಧ ದೇಗುಲಗಳಲ್ಲಿ ಪೂಜಾ ಕೈಂಕರ್ಯ ನಡೆಸಲಾಗುತ್ತಿದೆ.

ಈ ನಡುವೆ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಿಂದೂ ಸಂಘಟನೆಯ ಪ್ರಮುಖರನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ. ಮಡಿಕೇರಿ ನಗರದಲ್ಲಿರುವ ಓಂಕಾರೇಶ್ವರ ಮತ್ತು ಚೌಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಹೊರ ಬಂದ ಹಿಂದೂ ಸಂಘಟನೆಯ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ.

ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಕುಟ್ಟಪ್ಪ ಸ್ಮರಣಾರ್ಥ ಶಾಂತಿ ಪೂಜೆಯನ್ನು ಏರ್ಪಡಿಸಲಾಗಿತ್ತು. ಈ ಸಂಬಂಧ ಹಿಂದೂ ಸಂಘಟನೆಯ ಪ್ರಮುಖರು ಓಂಕಾರೇಶ್ವರ ದೇಗುಲದಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ದೇಗುಲದಿಂದ ಹೊರ ಬರುತ್ತಿದ್ದಂತೆಯೇ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಹಿಂದೂ ಸಂಘಟನೆಯ ಪ್ರಮುಖರನ್ನು ಬಂಧಿಸಲಾಯಿತು.

ಇನ್ನೊಂದೆಡೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಪ್ರಮುಖರು ಮೃತ ಕುಟ್ಟಪ್ಪ ಸ್ಮರಣಾರ್ಥ ಮಡಿಕೇರಿ ನಗರದ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಕುಟ್ಟಪ್ಪ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಾಧ್ಯಕ್ಷ ಮನುಮಂಜುನಾಥ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್ ಹಾಗೂ ಸದಸ್ಯರುಗಳು ಸೇರಿದಂತೆ ಹಿಂದೂ ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.

ಆದರೆ ಪೂಜೆ ಮುಗಿಸಿಕೊಂಡು ದೇಗುಲದಿಂದ ಹೊರ ಬರುತ್ತಿದ್ದಂತೆಯೇ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತಂದಿದ್ದರು.

Latest Indian news

Popular Stories

error: Content is protected !!