ಮಣಿಪಾಲದ ಅಪಾರ್ಟ್ಮೆಂಟ್’ನಲ್ಲಿ ಕಳ್ಳತನ ಪ್ರಕರಣ – ಆರೋಪಿ ಬಂಧನ

ಮಣಿಪಾಲ ವಿದ್ಯಾರತ್ನ ನಗರದ ಕೀರ್ತಿ ಸಾಮ್ರಾಟ್ ಅಪಾರ್ಟ್ ಮೆಂಟ್ ನಲ್ಲಿ ನಡೆದ ಲಕ್ಷಾಂತರ ಮೌಲ್ಯದ ಸೊತ್ತುಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮುರುಳಿ ಎನ್ ಡಿ ಎಂದು ಗುರುತಿಸಲಾಗಿದೆ. ಈತನನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಡ್ಡರಿ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಕಳವು ಮಾಡಿರುವ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜ‌.28ರಂದು ಮಣಿಪಾಲ ವಿದ್ಯಾರತ್ನ ನಗರದ ಕೀರ್ತಿ ಸಾಮ್ರಾಟ್ ಅಪಾರ್ಟ್ ಮೆಂಟ್ ನ ಎರಡನೇ ಮಹಡಿಯ ರೂಮ್ ಗೆ ನುಗ್ಗಿದ ಕಳ್ಳನು, ಲಾಪ್ ಟಾಪ್, ಕ್ಯಾಮರಾ ಸಹಿತ ಒಟ್ಟು 3.23 ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Latest Indian news

Popular Stories