ನವದೆಹಲಿ: ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಬಸ್ ವೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಕನಿಷ್ಟ 15 ಮಂದಿ ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಮಂಗಳವಾರ ನಡೆದಿದೆ.
ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಕೆಳಗೆ ಬಿದ್ದಿದೆ ಎಂದು ವರದಿಗಳು ತಿಳಿದಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಸರ್ಕಾರ ಮೃತರ ಕುಟುಂಬಕ್ಕೆ ತಲಾ ರೂ.4 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ರೂ.25 ಸಾವಿರ ಪರಿಹಾರವನ್ನು ಘೋಷಣೆ ಮಾಡಿದೆ.