ಮಳೆ ಅವಾಂತರದಿಂದ ನಗರದ ಖ್ಯಾತಿಗೆ ಧಕ್ಕೆ: ‘ಬೆಂಗಳೂರು ಬ್ರ್ಯಾಂಡ್’ ಉಳಿಸಿಕೊಳ್ಳಲು ಸಿಎಂಗೆ ಎಸ್.ಎಂ. ಕೃಷ್ಣ ಪತ್ರ

ಬೆಂಗಳೂರು: ಬೆಂಗಳೂರಿನ ಹಲವೆಡೆ ಮಳೆ ಅವಾಂತರದಿಂದ ನಗರದ ಖ್ಯಾತಿಗೆ ಧಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಎಸ್.ಎಂ. ಕೃಷ್ಣ ಪತ್ರ ಬರೆದಿದ್ದು ಬೆಂಗಳೂರಿಗೆ ಇರುವ ಬ್ರ್ಯಾಂಡ್ ಅನ್ನು ಉಳಿಸಿಕೊಳ್ಳುವ ಕುರಿತು ಕೆಲವು ಸಲಹೆಗಳನ್ನು ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮುಂಗಾರ ಪೂರ್ವ ಮಳೆಯಗುತ್ತಿದ್ದು ಇದರಿಂದ ಹಲವು ಅವಾಂತರಗಳ‌ು ಘಟಿಸಿ‌ ಜನಜೀವನಕ್ಕೆ ತೀವ್ರ ತೊಂದರೆಯನ್ನು ಉಂಟುಮಾಡಿದೆ. ಅದರಲ್ಲೂ ವಿಶ್ವದಲ್ಲಿನ ವೇಗದ ಬೆಳವಣಿಗೆಗಳ ನಗರಗಳ‌ ಸಾಲಿನಲ್ಲಿ ಮುಂಚೂಣಿಯಲ್ಲಿ ಇರುವ ಬೆಂಗಳೂರು ನಗರದಲ್ಲಿನ ಮಳೆ ಅನಾಹುತಗಳು ಆತಂಕ ಹುಟ್ಟಿಸಿದೆ. ಇದು ‘ಬ್ರಾಂಡ್ ಬೆಂಗಳೂರು’ ಹೆಸರಿಗೆ ಆತಂಕ ಸೃಷ್ಟಿಸಿದ್ದು, ಭವಿಷ್ಯತ್ತಿನಲ್ಲಿ ಇದರಿಂದ ಕೈಗಾರಿಕೆಗಳ ಸ್ತಾಪನೆ‌ ಮತ್ತು ರಾಜ್ಯಕ್ಕೆ ಬಂಡವಾಳ ಹೂಡುವ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನೆಯಾಗಲಿದೆ. ಅದರಿಂದ ಇಲ್ಲಿ ಪ್ರತಿಷ್ಟಾಪನೆಗೊಳ್ಳಬಹುದಾದ ಕೈಗಾರಿಕಾ ವಸಹಾತುಗಳು ಬೇರೆ ರಾಜ್ಯಗಳ ಪಾಲಗಿ ನಮ್ಮ ರಾಜ್ಯದ ಅಭಿವೃದ್ಧಿಗೆ ತೊಡಕಾಗಲಿದೆ ಎಂದು ಎಸ್.ಎಂ. ಕೃಷ್ಣ ಅವರು ಪತ್ರದಲ್ಲಿ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

Latest Indian news

Popular Stories