ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಎಫ್ಐಆರ್ ದಾಖಲಿಸದ ದೆಹಲಿ ಪೊಲೀಸರಿಗೆ DCW ನೋಟಿಸ್

ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ಲೈಂಗಿಕ ಕಿರುಕುಳದ ದೂರಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗ(ಡಿಸಿಡಬ್ಲ್ಯು) ಭಾನುವಾರ ನೋಟಿಸ್ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಲ್ಲ ಎಂದು ತನಗೆ ದೂರು ಬಂದಿರುವುದಾಗಿ ಮಹಿಳಾ ಆಯೋಗ ಹೇಳಿದೆ.

“ಅಪ್ರಾಪ್ತ ಬಾಲಕಿ ಸೇರಿದಂತೆ ಹಲವಾರು ಮಹಿಳಾ ಕುಸ್ತಿಪಟುಗಳು ಭಾರತೀಯ ಕುಸ್ತಿ ಫೆಡರೇಶನ್‌ನಲ್ಲಿ ಬ್ರಿಜ್ ಭೂಷಣ್ ಅಧಿಕಾರಾವಧಿಯಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ದೂರುದಾರರು ಆಯೋಗಕ್ಕೆ ಮಾಹಿತಿ ನೀಡಿದ್ದಾರೆ ಎಂದು ಡಿಸಿಡಬ್ಲ್ಯೂ ತಿಳಿಸಿದೆ.

“ಈ ಸಂಬಂಧ ಏಪ್ರಿಲ್ 21 ರಂದು ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಆದರೆ ತನ್ನ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರುದಾರರು ಆಯೋಗಕ್ಕೆ ತಿಳಿಸಿರುವುದಾಗಿ” ಮಹಿಳಾ ಆಯೋಗ ಹೇಳಿದೆ.

Latest Indian news

Popular Stories