ಮಾದಿಗ ಸಮುದಾಯ ಕಾಂಗ್ರೆಸ್ ತಿರಸ್ಕರಿಸಿ ಬಿಜೆಪಿಯನ್ನು ಬೆಂಬಲಿಸಬೇಕು: ಮುತ್ತಣ್ಣ ಬೆಣ್ಣೂರ

ವಿಜಯಪುರ : ಸಿದ್ಧರಾಮಯ್ಯ ಸರ್ಕಾರ ಸಾಮಾಜಿಕ ನ್ಯಾಯದ ವಿರುದ್ಧ, ಒಳಮೀಸಲಾತಿ ಜಾರಿ ಮಾಡಲು ತೀವ್ರ ನಿರ್ಲಕ್ಷ್ಯ ವಹಿಸಿತ್ತು, ಪ್ರಸ್ತುತ ಬಿಜೆಪಿ ಸರ್ಕಾರ ಒಳಮೀಸಲಾತಿ ವರ್ಗೀಕರಣ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು, ಮಾದಿಗ ಸಮುದಾಯ ಕಾಂಗ್ರೆಸ್ ತಿರಸ್ಕರಿಸಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮಾದಿಗ ಮಹಾಸಭಾ ಅಧ್ಯಕ್ಷ ಮುತ್ತಣ್ಣ ಬೆಣ್ಣೂರ ಕೋರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಇತಿಹಾಸದಲ್ಲಿಯೇ ಪರಿಶಿಷ್ಟರ ಸಮಗ್ರ ಅಭಿವೃದ್ಧಿಗಾಗಿ ಜನಸಂಖ್ಯಾಧಾರಿತ ಒಳಮೀಸಲಾತಿ ಜಾರಿಗೊಳಿಸಿದ್ದು ಭಾರತೀಯ ಜನತಾ ಪಕ್ಷ ಎಂದರು.

ಒಳಮೀಸಲಾತಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ ಪಕ್ಷದ ನಾಯಕರಿಗೆ ಇಲ್ಲ, ಪರಿಶಿಷ್ಟ ಸಮುದಾಯಗಳಿಗೆ ಮತ ಕೇಳುವ ಹಕ್ಕು ಸಹ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ, ನಮ್ಮ ದಲಿತ ಸಮುದಾಯದ ದಶಕಗಳ ಹೋರಾಟಕ್ಕೆ ಸ್ಪಂದನೆ ಮಾಡಿದ್ದು ಬಿಜೆಪಿ, ಹೀಗಾಗಿ ನಮಗೆ ಮತ ಕೇಳುವ ಹಕ್ಕು ಬಿಜೆಪಿಗೆ ಮಾತ್ರ ಇದೆ ಎಂದರು.

ಮಾದಿಗ ಸಮುದಾಯಕ್ಕೆ ಶೇ.6 ರಷ್ಟು ಒಳಮೀಸಲಾತಿ, ಚಲವಾದಿ ಸಮುದಾಯಕ್ಕೆ ಶೇ.5.5 ರಷ್ಟು ಒಳಮೀಸಲಾತಿ ಕಲ್ಪಿಸಿದ್ದು ಬಿಜೆಪಿ, ಆದರೆ ಕಾಂಗ್ರೆಸ್ ಹಾಗೂ ಸಿದ್ಧರಾಮಯ್ಯ ಅವರು ಡಾ.ಬಿ.ಆರ್. ಅಂಬೇಡ್ಕರ ಅವರ ಹೆಸರನ್ನು ರಾಜಕೀಯಕ್ಕೆ ಬಳಸಿಕೊಂಡಿದೆ ಎಂದರು.

ಸಂಘಟನಾ ಸಂಚಾಲಕ ಪರಶುರಾಮ ಹೊನ್ನಳ್ಳಿ, ಸತೀಶ ಸೂಳಿಕೆರಿ, ಬಾಳಪ್ಪ ಗೂಗಿಹಾಳ, ಕಿರಣ ಆಸಂಗಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Latest Indian news

Popular Stories