ಮಿತ್ರ ಆಸ್ಪತ್ರೆಯ ನಿರ್ದೇಶಕ ಪ್ರಸಿದ್ಧ ವೈದ್ಯ ಡಾ.ಶ್ರೀಧರ್ ಹೊಳ್ಳ ನಿಧನ

ಉಡುಪಿ: ನಗರದ ಪ್ರಸಿದ್ಧ ವೈದ್ಯರು, ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಧರ ಹೊಳ್ಳ(67) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮಣಿಪಾಲ ಕೆ.ಎಮ್.ಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಉಡುಪಿಯ ಮಿತ್ರ ಪ್ರಿಯ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯಾಗಿ ರೋಗಿಗಳಿಗೆ ನಗುಮೋಗದ ಸೇವೆ ನೀಡುತ್ತಿದ್ದ ಇವರು ಡಿ.17 ರಂದು ಮನೆಯಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು.

ಮೆದುಳಿನ ಕಾಯಿಲೆಗೆ ತುತ್ತಾಗಿದ್ದ ಇವರು ನಲ್ವತ್ತು
ದಿನಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೊಳ್ಳ ಅವರು ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮೃತರು ಪತ್ನಿ, ಮೂವರು ವೈದ್ಯರಾದ ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು ಸಹಿತ ಅಪಾರ ಬಂಧು
ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯು ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಮಧ್ಯಾಹ್ನ 2.30ಕ್ಕೆ
ನಡೆಯಲಿದೆಂದು ಕುಟುಂಬ ಮೂಲಗಳು ತಿಳಿಸಿವೆ.

Latest Indian news

Popular Stories