ಮಿರ್ಝಾಪುರ್ ಚಿತ್ರ ನಟ ಶಹನವಾಜ್ ಪ್ರಧಾನ್ ಹೃದಯಾಘಾತದಿಂದ ಮೃತ್ಯು

“ಮಿರ್ಜಾಪುರ್” ಮತ್ತು “ರಯೀಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಹೆಚ್ಚು ಹೆಸರುವಾಸಿಯಾದ ಶಹನವಾಜ್ ಪ್ರಧಾನ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ನಟ ಯಶಪಾಲ್ ಶರ್ಮಾ ಹೇಳಿದ್ದಾರೆ.

ಶುಕ್ರವಾರ ಸಂಜೆ ಇಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನ್ ಅವರು ತೀವ್ರ ಎದೆನೋವಿನಿಂದಾಗಿ ಪ್ರಜ್ಞಾಹೀನರಾಗಿ ಬಿದ್ದು ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶರ್ಮಾ ಅವರು ಘಟನೆಯ ವಿವರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

Latest Indian news

Popular Stories