ಶಿವಮೊಗ್ಗ : ರಾಷ್ಟ್ರೀಯ ಕಾರ್ಯಕಾರಿಣಿ ಉತ್ತಮವಾಗಿ ನಡೆಯಿತು ದೇಶದ ಹಾಗೂ ರಾಜ್ಯಗಳ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆಯಾಗಿದ್ದು, ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳನ್ನು ಜೊತೆಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ.
ಚುನಾವಣೆ ಗೆಲ್ಲಲು ಬೇಕಾದ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮೋದಿಯವರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾರ್ಗದರ್ಶನ ಮಾಡಿದರು. ಬಹಳ ಉತ್ಸಾಹದಿಂದ ವಾಪಸ್ ಬಂದಿದ್ದೇವೆ. ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ನಾವು ಬರಲೇಬೇಕು.ಮೋದಿ, ಅಮಿತ್ ಶಾ, ನಡ್ಡಾ ಅವರು ಹೆಚ್ಚು ಸಮಯ ರಾಜ್ಯಕ್ಕೆ ಕೊಡುತ್ತಾರೆ. ಅದರ ಬಳಕೆ ಮಾಡಿಕೊಂಡು, 140 ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಕಾರ್ಯಪ್ರವೃತ್ತರಾಗುತ್ತೇವೆ. ಶಾಸಕರು, ಕಾರ್ಯಕರ್ತರು ಹೆಚ್ಚು ಕೆಲಸ ಮಾಡಬೇಕು.ಎಲ್ಲರಲ್ಲೂ ವಿಶ್ವಾಸ ಮೂಡಿಸಬೇಕು ಎಂದರು.
ಈಗಾಗಲೇ ನಾವು ಕೇಂದ್ರದ ನಾಯಕರ ಜೊತೆ ಚೆನ್ನಾಗಿ ಇದ್ದೇವೆ. ನಮ್ಮ ಬಗ್ಗೆ ಗೌರವ, ವಿಶ್ವಾಸ ಇದೆ. ಬರುವ ದಿನ ಇನ್ನಷ್ಟು ಸಂಪರ್ಕ ಮಾಡಲು ಪ್ರಧಾನಿ ಅಪೇಕ್ಷೆಯಂತೆ ಕೆಲಸ ಮಾಡುತ್ತೇವೆ ಎಂದರು.
ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆಗೆ ಪ್ರಧಾನಿ ಸಮಯ ಕೊಡುತ್ತಾರೆ. ನಾಲ್ಕೈದು ದಿನದಲ್ಲಿ ದಿನಾಂಕ ನಿಗದಿಯಾಗುತ್ತದೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ ಎಂದರು.