ಬೆಂಗಳೂರು: ಕೇರಳದಲ್ಲಿ ಈ ಬಾರಿ ಎಂದಿಗಿಂತ ಪೂರ್ವದಲ್ಲೇ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರ ಆರಂಭವಾಗುತ್ತದೆ. ಆದರೆ ಈ ಬಾರಿ ಬಹುಶಃ ಒಂದು ವಾರ ಮುಂಚಿತವಾಗಿ ರಾಜ್ಯದ ಮೇಲೆ ಮಾನ್ಸೂನ್ ಪ್ರಾರಂಭವಾಗುವ ಸಾಧ್ಯತೆಯಿದೆ.
ಮೇ 15ರ ಸುಮಾರಿಗೆ ನೈಋತ್ಯ ಮಾನ್ಸೂನ್ ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಗೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೊರಡಿಸಿದ ಹವಾಮಾನ ಬುಲೆಟಿನ್ ಪ್ರಕಟಿಸಿದೆ.
ಅಸಾನಿ ಚಂಡಮಾರುತದ ಪ್ರಭಾವ ಕಡಿಯಾದರೂ ಕರ್ನಾಟಕದಲ್ಲಿ ಮಳೆಯ ಆರ್ಭಟ ಮಾತ್ರ ಕಡಿಮೆ ಆಗಲ್ಲ. ಇನ್ನೂ 5 ದಿನ ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಮುಂದುವರಿದಿದೆ.