ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನಪ್ರಿಯತೆ ಈಗಲೂ ಕುಗ್ಗಿಲ್ಲ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ನಂತರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. ಯಡಿಯೂರಪ್ಪನವರು ಒಂದು ಶಕ್ತಿ, ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯನ್ನು ಬಿಜೆಪಿ ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತಿದ್ದು ಪಕ್ಷ ಅಧಿಕಾರಕ್ಕೆ ಬಂದ ನಂತರ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬುದನ್ನು ಶಾಸಕರ ಅಭಿಪ್ರಾಯ ಪಡೆದು ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಹೇಳಿದರು.
ದೇಶವನ್ನು ದಿವಾಳಿ ಮಾಡಿರುವ ಕಾಂಗ್ರೆಸ್ ಪಕ್ಷ ಹೇಗಾದರೂ ಮಾಡಿ ಅಧಿಕಾರ ಹಿಡಿದು ತನ್ನ ನಾಯಕರಿಗೆ ಕರ್ನಾಟಕ ಎಟಿಎಂ ಆಗಬೇಕೆಂದು ಬಯಸಿದೆ. ಜೆಡಿಎಸ್‌ನವರು ಅತಂತ್ರ ಫಲಿತಾಂಶ ಬರಲೆಂದು ಕಾಯುತ್ತಿದ್ದಾರೆ. ಆದರೆ, ರಾಜ್ಯದ ಜನರು ಇದಕ್ಕೆ ಅವಕಾಶ ನೀಡುವುದಿಲ್ಲ. ಕೇಂದ್ರ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಗುರುತಿಸಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಲಿದ್ಧಾರೆ ಎಂದು ಹೇಳಿದರು.