ಯಡಿಯೂರಪ್ಪ ಸಿಎಂ ಸ್ಥಾನ ಕಳೆದುಕೊಳ್ಳಲು ಲಕ್ಷ್ಮಣ ಸವದಿ ಕಾರಣ, ಅವನ ರಾಜಕೀಯ ಜೀವನ ಅಂತ್ಯವೇ ನನ್ನ ಗುರಿ’: ರಮೇಶ್ ಜಾರಕಿಹೊಳಿ

ಬೆಳಗಾವಿ: ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನ ಕಳೆದುಕೊಳ್ಳಲು ಈಗ ಕಾಂಗ್ರೆಸ್ ಪಕ್ಷ ಸೇರಿರುವ ಲಕ್ಷ್ಮಣ ಸವದಿಯೇ ಕಾರಣ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಗಳವಾರ ಅಥಣಿಯ ಪಕ್ಷದ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದ ಸ್ಥಳೀಯ ಮುಖಂಡರನ್ನು ಸ್ವಾಗತಿಸಿ ಮಾತನಾಡಿದ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಲಕ್ಷ್ಮಣ ಸವದಿ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಬೇಕೆಂದು ಬಯಸಿರಲಿಲ್ಲ, ಆದರೆ ಪಕ್ಷದ ವರಿಷ್ಠರು ಅವರನ್ನು ಉನ್ನತ ಹುದ್ದೆಗೆ ನೇಮಿಸಿದ್ದರು. ಯಡಿಯೂರಪ್ಪ ಅವರು ಸಿಎಂ ಸ್ಥಾನ ತ್ಯಜಿಸಲು ಸವದಿ ಅವರೇ ಕಾರಣ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದರು.

ಸವದಿ ಯಡಿಯೂರಪ್ಪನವರ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸಿ ನಂತರ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಮಾಡಿದರು. ಈಗ, ಸವದಿ ಅವರನ್ನು ಅಥಣಿಯಲ್ಲಿ ಸೋಲಿಸಿ ಮನೆಗೆ ಕಳುಹಿಸಲು ಸಿದ್ಧನಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಮತ್ತು ನಾವು ಅಧಿಕಾರಕ್ಕೆ ಬಂದ ನಂತರ, ಬೆಳಗಾವಿಯ ಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿಯಿಂದ ಮತ್ತು ಅಥಣಿಯ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಸಮಿತಿಯಿಂದ ಅವರನ್ನು ಮತ್ತು ಅವರ ಬೆಂಬಲಿಗರನ್ನು ತೆಗೆದುಹಾಕುವ ಕೆಲಸವನ್ನು ಪ್ರಾರಂಭಿಸುತ್ತೇನೆ. ಸವದಿ ರಾಜಕೀಯ ಜೀವನ ಅಂತ್ಯಗೊಳಿಸುವುದು ನನ್ನ ಗುರಿ ಎಂದು ಹೇಳಿದರು.

ಅಂತೆಯೇ ಮಾಧ್ಯಮಗಳು ಮತ್ತು ಪ್ರಕಾಶನ ಸಂಸ್ಥೆಗಳನ್ನು ಟೀಕಿಸಿದ ರಮೇಶ್ ಜಾರಕಿಹೊಳಿ ಅವರು, ಸಮೀಕ್ಷೆಗಳ ನೆಪದಲ್ಲಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದರು. ಮೇ 10 ರಂದು ಮತ ಎಣಿಕೆ ನಡೆಯುವವರೆಗೆ ಯಾವುದೇ ಸುದ್ದಿ ನೋಡದಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.

Latest Indian news

Popular Stories