ಯುವ ಜನತಾದಳ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಜೆಡಿಎಸ್ (JDS)​ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.

ಆದ್ರೆ, ರಾಜೀನಾಮೆ ಅಂಗೀಕಾರವಾಗಿಲ್ಲ. ಇದರ ಬೆನ್ನಲ್ಲೇ ಇದೀಗ ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ರಾಜೀನಾಮೆ ನೀಡಿದ್ದಾರೆ.  ಪಕ್ಷದ ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರವಾನಿಸಿದ್ದಾರೆ. ಪಕ್ಷದ ಜತೆ ಸದಾ ನಿಲ್ಲುವೆ, ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ. ಅಲ್ಲದೇ ಸೋಲೇ ಅಂತಿಮವಲ್ಲ. ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡಿದ್ದೇನೆ. ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಈಗ ನಿಖಿಲ್ ಸ್ಥಾನಕ್ಕೆ ಯಾರು ಸೂಕ್ತ ಎಂಬ ಪ್ರಶ್ನೆಗಳು ಸಹ ಉದ್ಭವವಾಗಿದೆ.

Latest Indian news

Popular Stories