ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಅಪಘಾತಕ್ಕೆ ಬಲಿ

0
261

ಶಿಲಾಂಗ್: ತಮಿಳುನಾಡು ಮೂಲದ ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.

ಭಾನುವಾರದಂದು ಶಿಲಾಂಗ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. 18 ವರ್ಷದ ವಿಶ್ವ ಅವರು ತಂಡದ ಮೂವರು ಆಟಗಾರರ ಜೊತೆ ಗುವಾಹಟಿಯಿಂದ ಶಿಲಾಂಗ್‌ಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮುಂಭಾಗದಿಂದ ಬಂದ 12 ಚಕ್ರಗಳ ಟ್ರೇಲರ್, ರಸ್ತೆ ವಿಭಜಕಕ್ಕೆ ಗುದ್ದಿ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಚಾಲಕ ಸ್ಥಳದಲ್ಲೇ
ಸಾವಿಗೀಡಾಗಿದ್ದು, ವಿಶ್ವ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇನ್ನು ರಮೇಶ್ ಸಂತೋಷ್ ಕುಮಾರ್, ಅವಿನಾಶ್ ಪ್ರಸನ್ನಜಿ ಮತ್ತು ಕಿಶೋರ್ ಕುಮಾರ್ ಗಂಭೀರ ಗಾಯಗೊಂಡಿದ್ದಾರೆ ಎಂದು ಭಾರತ ಟೇಬಲ್ ಟೆನಿಸ್ ಫೆಡರೇಷನ್ ತಿಳಿಸಿದೆ.

ರಾಷ್ಟ್ರೀಯ ಟೂರ್ನಿಗಳಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿರುವ ವಿಶ್ವ ಅವರು ಅಂತಾರಾಷ್ಟ್ರೀಯ ಟೂರ್ನಿಗಳಲ್ಲೂ ಪದಕ ಗಳಿಸಿದ್ದಾರೆ. ಇದೇ 27ರಿಂದ ಆಸ್ಟ್ರಿಯಾದ ಲಿನ್ಜ್‌ನಲ್ಲಿ ನಡೆಯಲಿರುವ ಡಬ್ಲ್ಯುಟಿಟಿ ಯೂತ್ ಕಂಟೆಂಡರ್‌ನಲ್ಲಿ ಅವರು ಪಾಲ್ಗೊಳ್ಳಬೇಕಾಗಿತ್ತು.

LEAVE A REPLY

Please enter your comment!
Please enter your name here