ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟ್ ಆಟಗಾರ ಆಂಡ್ರ್ಯೂ ಸೈಮಂಡ್ಸ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸೈಮಂಡ್ಸ್ ತನ್ನ ತವರು ರಾಜ್ಯವಾದ ಕ್ವೀನ್ಸ್‌ಲ್ಯಾಂಡ್‌ನ ಟೌನ್ಸ್‌ವಿಲ್ಲೆಯ ಹೊರಭಾಗದಲ್ಲಿ ಸಂಭವಿಸಿದ ಅಪಘಾತದಲ್ಲಿ 46 ವರ್ಷದ ಸೈಮಂಡ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದರು.
“ಪ್ರಾಥಮಿಕ ಮಾಹಿತಿಯ ಪ್ರಕಾರ ರಾತ್ರಿ 11 ಗಂಟೆಯ ನಂತರ ಕಾರ್ ಅನ್ನು ಆಲಿಸ್ ರಿವರ್ ಬ್ರಿಡ್ಜ್ ಬಳಿಯ ಹರ್ವೆ ರೇಂಜ್ ರಸ್ತೆಯಲ್ಲಿ ಓಡಿಸುತ್ತಿದ್ದಾಗ ಅದು ರಸ್ತೆಮಾರ್ಗವನ್ನು ಬಿಟ್ಟು ಉರುಳಿದೆ ಎಂದು ತಿಳಿದುಬಂದಿದೆ” ಎಂದು ಪೊಲೀಸ್ ಹೇಳಿಕೆ ದೃಢಪಡಿಸಿದೆ.