ರಾಜ್ಯದಲ್ಲಿ 37 ಐ.ಎ.ಎಸ್ ಮತ್ತು ಐ.ಎಫ್.ಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 30 ಐಎಎಸ್ ಹಾಗೂ 7 ಐಎಫ್‍ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ನಿನ್ನೆಯಷ್ಟೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯು 29 ಐಎಎಸ್ ಅಧಿಕಾರಿಗಳು ಮತ್ತು 6 ಐಎಫ್ಎಸ್ ಅಧಿಕಾರಿಗಳನ್ನು ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದರಂತೆ ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ)ರಾಗಿದ್ದ ರಂದೀಪ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ಮಾಡಲಾಗಿದ್ದು, ಕೆ.ವಿ. ತ್ರಿಲೋಕಚಂದ್ರ ಅವರಿಗೆ ವಿಶೇಷ ಆಯುಕ್ತರು (ಆರೋಗ್ಯ ಮತ್ತು ಐಟಿ) ಬಿಬಿಎಂಪಿ ಜವಾಬ್ದಾರಿ ನೀಡಲಾಗಿದೆ.

ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ-ಬಿ.ಎಚ್.ಅನಿಲ್ ಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ-ಕಪಿಲ್ ಮೋಹನ್, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ-ಎಸ್.ಆರ್.ಉಮಾಶಂಕರ್, ಶಿಕ್ಷಣ ಇಲಾಖೆ(ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ)ಯ ಕಾರ್ಯದರ್ಶಿ ಹಾಗೂ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಇಲಾಖೆಯ ಕಾರ್ಯದರ್ಶಿ(ಹೆಚ್ಚುವರಿ ಹೊಣೆಗಾರಿಕೆ)-ಡಾ.ಸೆಲ್ವಕುಮಾರ್.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ)ಯ ಕಾರ್ಯದರ್ಶಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ(ಹೆಚ್ವುವರಿ ಹೊಣೆಗಾರಿಕೆ)-ನವೀನ್ ರಾಜ್ ಸಿಂಗ್, ವಸತಿ ಇಲಾಖೆಯ ಕಾರ್ಯದರ್ಶಿ ಹಾಗೂ ಅಬಕಾರಿ ಇಲಾಖೆಯ ಆಯುಕ್ತ(ಹೆಚ್ಚುವರಿ ಹೊಣೆಗಾರಿಕೆ)-ಡಾ.ಜೆ.ರವಿಶಂಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆಯುಷ್ ಸೇವೆಗಳ ಆಯುಕ್ತ-ಡಿ.ರಣದೀಪ್, ಬಿಬಿಎಂಪಿ ವಿಶೇಷ ಆಯುಕ್ತ(ಆರೋಗ್ಯ ಮತ್ತು ಐಟಿ)-ಡಾ.ಕೆ.ವಿ.ತ್ರಿಲೋಕ್ ಚಂದ್ರ, ಕೆಎಸ್‍ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ-ಕೆ.ಪಿ.ಮೋಹನ್ ರಾಜ್.

ಕೆಎಸ್‍ಎಂಸಿಎಲ್ ವ್ಯವಸ್ಥಾಪಕ ನಿರ್ದೇಶಕಿ-ಬಿ.ಬಿ.ಕಾವೇರಿ, ಜವಳಿ ಅಭಿವೃದ್ಧಿ ಆಯುಕ್ತ ಹಾಗೂ ಕೈಮಗ್ಗ ನಿರ್ದೆಶಕ ಹಾಗೂ ರಾಜ್ಯ ರೇಷ್ಮೆ ಕೈಗಾರಿಕೆ ನಿಗಮದ ವ್ಯವಸ್ಥಾಪಕ ನಿರ್ದೇಶಕ(ಹೆಚ್ಚುವರಿ ಹೊಣೆಗಾರಿಕೆ)-ಟಿ.ಎಚ್.ಎಂ.ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ-ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಮಕ್ಕಳ ಸಮಗ್ರ ಅಭಿವೃದ್ಧಿ ಯೋಜನೆಯ ನಿರ್ದೇಶಕಿ-ಎಂ.ಕನಗವಲ್ಲಿ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ-ಆರ್.ವೆಂಕಟೇಶ್ ಕುಮಾರ್, ರಾಯಚೂರು ಜಿಲ್ಲಾಧಿಕಾರಿ-ಚಾರುಲತಾ ಸೋಮಲ್, ಪಂಚಾಯತ್‍ರಾಜ್ ಇಲಾಖೆಯ ಆಯುಕ್ತೆ-ಸಿ.ಟಿ.ಶಿಲ್ಪಾ ನಾಗ್, ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೇಶಕಿ-ಕೆ.ಲಕ್ಷ್ಮಿ ಪ್ರಿಯಾ, ವಿಜಯನಗರ ಜಿಲ್ಲಾ ಪಂಚಾಯತ್ ಸಿಇಒ-ಭೋಯರ್ ಹರ್ಷಲ್ ನಾರಾಯಣ್ ರಾವ್.

ಕೋಲಾರ ಜಿಲ್ಲಾ ಪಂಚಾಯತ್ ಸಿಇಒ-ಉಕೇಶ್ ಕುಮಾರ್, ಕೊಡಗು ಜಿಲ್ಲಾಧಿಕಾರಿ-ಡಾ.ಬಿ.ಸಿ.ಸತೀಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ-ಡಾ.ಎಚ್.ಎನ್.ಗೋಪಾಲಕೃಷ್ಣ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ-ಶಿವಾನಂದ ಕಪಾಶಿ, ಪೌರಾಡಳಿತ ನಿರ್ದೇಶಕಿ-ಎಂ.ಎಸ್.ಅರ್ಚನಾ, ಚಾಮರಾಜನಗರ ಜಿಲ್ಲಾ ಪಂಚಾಯತ್ ಸಿಇಒ-ಕೆ.ಎಂ.ಗಾಯತ್ರಿ, ರಾಜ್ಯ ರೇಷ್ಮೆ ಮಾರಾಟ ಮಂಡಳಿಯ ನಿರ್ದೇಶಕಿ-ಡಾ.ಕೆ.ಎನ್.ಅನುರಾಧಾ ಹಾಗೂ ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಎನ್.ಎಂ.ನಾಗರಾಜ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಯೋಜನೆ)-ಸುಭಾಶ್ ಕೆ.ಮಲ್ಕೇಡೆ, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮಹಾನಿರ್ದೇಶಕ(ಇಎಂಪಿಆರ್‍ಐ)-ಜಗ್ಮೋಹನ್ ಶರ್ಮಾ, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ವನ್ಯಜೀವಿ)-ಕುಮಾರ್ ಪುಷ್ಕರ್.

ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ-ಮನೋಜ್ ಕುಮಾರ್, ಶಿವಮೊಗ್ಗ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ-ಮನೋಜ್ ಕುಮಾರ್ ತ್ರಿಪಾಠಿ, ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ-ಉಪೇಂದ್ರ ಪ್ರತಾಪ್ ಸಿಂಗ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಸಂಶೋಧನೆ)ಯಾಗಿ ಆರ್.ರವಿಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

Latest Indian news

Popular Stories