ರಾಜ್ಯ ಸರ್ಕಾರದ ಹೊಸ ಮೀಸಲಾತಿ 2ಸಿ, 2ಡಿಗೆ ಹೈಕೋರ್ಟ್ ತಡೆ, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ

ಬೆಂಗಳೂರು: ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ 2ಡಿ ಮತ್ತು ಒಕ್ಕಲಿಗರಿಗೆ 2ಸಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು.

ಬೊಮ್ಮಾಯಿ ಸಂಪುಟದ ತೀರ್ಮಾನ ಪ್ರಶ್ನಿಸಿ ರಾಘವೇಂದ್ರ ಡಿ.ಜಿ. ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸಂಪೂರ್ಣ ವಿಚಾರಣೆಯಾಗುವವರೆಗೆ ಹೊಸ ಮೀಸಲಾತಿ ಘೋಷಣೆ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಮೀಸಲಾತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಸದ್ಯ ಇರುವ ಮೀಸಲಾತಿ ನೀತಿಯನ್ನೇ ಮುಂದುವರಿಸಬೇಕು. ಈ ಬಗ್ಗೆ ಪೂರ್ಣ ವಿಚಾರಣೆ ನಡೆಸಿದ ನಂತರ ಮುಂದಿನ ತೀರ್ಪನ್ನಾಧರಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ಹೇಳಿದೆ.

Latest Indian news

Popular Stories