ರಾಹುಲ್ ಕುರಿತು ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಖಂಡಿಸಿದ ಬಿ.ಎಸ್ ಯಡಿಯೂರಪ್ಪ

ವಿಜಯಪುರ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಮತ್ತು ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ( ಅಸಮಾಧಾನ ಹೊರ ಹಾಕಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಮೊರಟಗಿಯಲ್ಲಿ ಮಾತನಾಡಿದ ಮಾಜಿ ಸಿಎಂ, ರಾಹುಲ್ ಗಾಂಧಿ ಅವರ ಬಗ್ಗೆ ಗೌರವ ಇದೆ. ಅಗೌರವ ತರುವ ಹಾಗೆ ಯಾರೂ ಮಾತನಾಡಬಾರದು, ಈ ರೀತಿ ಯಾರು ಮಾತನಾಡಬಾರದು ಎಂದು ಹೇಳುವ ಮೂಲಕ ನಳಿನ್ ಕುಮಾರ್ ಕಟೀಲ್ ಹೇಳಿಗೆ ಯಡಿಯೂರಪ್ಪ ಅಸಮಾಧಾನ ಹೊರ ಹಾಕಿದರು.

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಅನಗತ್ಯವಾಗಿ ಏನೋ ಸಾಧನೆ ಮಾಡಿದ್ದೇವೆ ಎಂಬ ರೀತಿಯಲ್ಲಿ ಇಬ್ಬರು ಮಾತನಾಡುತ್ತಿದ್ದಾರೆ, ಆರ್ ಎಸ್ಎಸ್ (RSS) ಬಗ್ಗೆ ಮಾತನಾಡೋದರಿಂದ ಯಾವುದೇ ಲಾಭ ಇಲ್ಲ. ಆರ್‌ಎಸ್ಎಸ್ ಹೆಸರು ಬಳಸುವುದು ಅಗತ್ಯ ಇಲ್ಲ. ಕುಮಾರಸ್ವಾಮಿ ಯಾವಾಗ ಏನು ಮಾತನಾಡುತ್ತಾರೆ ಎಂಬುವುದು ಅವರಿಗೆ ಗೊತ್ತಿರಲ್ಲ. ಮತದಾರರಿಗೆ ಗೊತ್ತು ಇದೆ ಯಾವುದು ಸರಿ ಯಾವುದು ತಪ್ಪು. ಈ ಬಾರಿ ಚುನಾವಣೆಯಲ್ಲಿ ಮತದಾರರು ಉತ್ತರ ನೀಡುತ್ತಾರೆ ಎಂದು ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.

Latest Indian news

Popular Stories

error: Content is protected !!