ರಾಹುಲ್ ಗಾಂಧಿಗೆ ಮೊಣ ಕಾಲು ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ

ಕೋಝಿಕ್ಕೋಡ್‌: ಮೊಣಕಾಲು ಸಂಬಂಧಿ ಸಮಸ್ಯೆಗೆ ಕೇರಳದಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಮೊಣಕಾಲು ಸಂಬಂಧಿತ ಸಮಸ್ಯೆಗಾಗಿ ಜುಲೈ 21 ರಂದು ಕೊಟ್ಟಕ್ಕಲ್ ಆರ್ಯ ವೈದ್ಯ ಸಾಲಾಗೆ ದಾಖಲಿಸಲಾಗಿತ್ತು. ಅವರನ್ನು ಭಾನುವಾರ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಹೆಸರು ಹೇಳಲು ಇಚ್ಛಿಸದ ಪಕ್ಷದ ಹಿರಿಯ ನಾಯಕರೊಬ್ಬರು ಕೋಝಿಕ್ಕೋಡ್‌ನಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡುವಾಗ ಗಾಂಧಿಯವರು ಮೊಣಕಾಲು ಸಂಬಂಧಿತ ಸಮಸ್ಯೆಗೆ ಗುರಿಯಾಗಿದ್ದರು ಎಂದು ಹೇಳಲಾಗಿದೆ.

Latest Indian news

Popular Stories