ಪ್ರತಿಭಟನೆಗೆ ಆಗಮಿಸುತ್ತಿರುವ ಕಾಂಗ್ರೆಸ್ ನಾಯಕರು
ಬೆಂಗಳೂರು: ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ BJP ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ.
ಈಗಾಗಲೇ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದು, ಸಚಿವರುಗಳಾದ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಯುಬಿ ಬಣಕಾರ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ.