ರೈಲು ದುರಂತಕ್ಕೆ ಮಸೀದಿ ಕಾರಣ ಎಂಬ ಸುಳ್ಳು ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎಸ್ ವಿರುದ್ಧ ಒಡಿಶಾ ಪೊಲೀಸರಿಂದ ಪ್ರಕರಣ ದಾಖಲು

ತುಮಕೂರು: ಒಡಿಶಾದ ರೈಲು ದುರಂತಕ್ಕೆ ಮಸೀದಿ
ಕಾರಣವೆಂದು ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆ ಫೋಟೋ ಶೇರ್ ಮಾಡಿ ವಿವಾದ ಸೃಷ್ಟಿಸಿದ್ದಳು.

ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಒಡಿಶಾ ಪೊಲೀಸರು ಆಕೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಹೌದು. ಒಡಿಶಾದ ಬಾಲಸೋರ್‌ನಲ್ಲಿ ನಡೆದ ತ್ರಿವಳಿ ರೈಲು ದುರಂತದಲ್ಲಿ 275 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಈ
ದುರಂತಕ್ಕೆ ಕೋಮು ಬಣ್ಣ ಹಚ್ಚುವ ಪ್ರಯತ್ನ ನಡೆಯುತ್ತಿದೆ.

ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು
ಎಂದು ಒಡಿಶಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ
ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತೆ ಶಂಕುತಲಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ ಕಾರ್ಯಕರ್ತೆ ಶಂಕುತಲಾ, ತ್ರಿವಳಿ ರೈಲು ದುರಂತದ
ಸಮೀಪದ ಮಸೀದಿ ಕಡೆಗೆ ಬಾಣದ ಗುರುತು ಮಾಡಿ
ಪೋಸ್ಟ್ ಹಾಕಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ
ವೈರಲ್ ಆಗಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದು
ವಿವಾದಕ್ಕೆ ತಿರುಗುತ್ತಿದ್ದಂತೆಯೇ ಒಡಿಶಾ ಪೊಲೀಸರು ಕೇಸ್
ದಾಖಲಿಸಿಕೊಂಡಿದ್ದಾರೆ.

Latest Indian news

Popular Stories