ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್‌ಟಿಟಿಇ) ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತ

ಚೆನ್ನೈ: ಉಗ್ರ ಸಂಘಟನೆ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್‌ಟಿಟಿಇ) ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತವಾಗಿದ್ದು, ಅವರ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನ ಮಾಜಿ ನಾಯಕ ಪಜಾ ನೆಡುಮಾರನ್ ಸೋಮವಾರ ಹೇಳಿದ್ದಾರೆ.

ಪ್ರಭಾಕರನ್ ಶೀಘ್ರದಲ್ಲೇ ಸಾರ್ವಜನಿಕರ ಮುಂದೆ ಕಾಣಿಸಿಕೊಳ್ಳಲಿದ್ದು, ತಮಿಳು ಜನಾಂಗದ ವಿಮೋಚನೆಗಾಗಿ ಯೋಜನೆಯೊಂದನ್ನು ಘೋಷಿಸಲಿದ್ದಾರೆ. ಪ್ರಪಂಚದ ಎಲ್ಲಾ ತಮಿಳು ಜನರು ಒಟ್ಟಾಗಿ ಅವರನ್ನು ಬೆಂಬಲಿಸಬೇಕು ಎಂದು ಪಜಾ ನೆಡುಮಾರನ್ ಮನವಿ ಮಾಡಿದ್ದಾರೆ. 

 ‘ತಮಿಳು ರಾಷ್ಟ್ರೀಯ ನಾಯಕ ಪ್ರಭಾಕರನ್ ಬಗ್ಗೆ ಸತ್ಯವನ್ನು ಘೋಷಿಸಲು ಸಂತೋಷಪಡುತ್ತೇವೆ. ಅವರು ಚೆನ್ನಾಗಿದ್ದಾರೆ. ಪ್ರಪಂಚದಾದ್ಯಂತದ ತಮಿಳು ಜನರಿಗೆ ಇದನ್ನು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಸುದ್ದಿಯು ವ್ಯವಸ್ಥಿತವಾಗಿ ನಡೆಯುತ್ತಿದ್ದ ಊಹಾಪೋಹಗಳಿಗೆ ಕೊನೆ ಹಾಡುತ್ತದೆ’ ಎಂದು ಭಾವಿಸುವುದಾಗಿ ಅವರು ತಿಳಿಸಿದ್ದಾರೆ.  ಪ್ರಭಾಕರನ್ ಅವರನ್ನು ಶ್ರೀಲಂಕಾ ಸೇನಾಪಡೆ 2009 ರಲ್ಲಿ ಹತ್ಯೆಗೈದಿತ್ತು. 

Latest Indian news

Popular Stories