ಲೋಕಾಯುಕ್ತಕ್ಕೆ ದೂರು ನೀಡಿದ ಕಾರಣ ಪೊಲೀಸರಿಂದ ಮಾನಸಿಕ ಕಿರುಕುಳ – ಕಬೀರ್ ಉಳ್ಳಾಲ್ ಆರೋಪ

ಮಂಗಳೂರು, ಫೆ.7: ಮಂಗಳೂರು ಪೊಲೀಸ್ ಕಮೀಷನರ್ ಸೇರಿದಂತೆ ಉಳ್ಳಾಲದ ಪೊಲೀಸರ ಮೇಲೆ ಇದೀಗ ಗಂಭೀರವಾದ ಆರೋಪ ಕೇಳಿ ಬಂದಿದೆ. ಈ ಕುರಿತು ಸುದ್ಧಿಗೋಷ್ಟಿ ನಡೆಸಿದ ಮಾಹಿತಿ ಹಕ್ಕು ಕಾರ್ಯಕರ್ತ ಕಬೀರ್ ಉಳ್ಳಾಲ್ , “ಉಳ್ಳಾಲ ಪೊಲೀಸರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಮೂರು ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು
ಒತ್ತಾಯಿಸಿದರು.ಪ್ರಕರಣಗಳ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಹಾಗೂ ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ವಿರುದ್ಧ ಈಗಾಗಲೇ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ದೂರು ನೀಡಿದ ಬಳಿಕ ಪೊಲೀಸರಿಂದ ನನಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಇತ್ತೀಚೆಗೆ ನಂದಿಗುಡ್ಡೆ ಪ್ಲಾಟ್ ನಲ್ಲಿ ನಡೆದ ವೇಶ್ಯಾವಾಟಿಕೆ ಪ್ರಕರಣ, ಚಿನ್ನ ದರೋಡೆ ಪ್ರಕರಣ, ಮಂಗಳೂರಿನಲ್ಲಿ ಮಾದಕ ವಸ್ತು ಬಳಕೆ ಪ್ರಕರಣಗಳು ಸಿಬಿಐ ತನಿಖೆಗೆ ಒಳಪಡಿಸಿದರೆ ಭ್ರಷ್ಟಾಚಾರದ ಸಂಪೂರ್ಣ ಮಾಹಿತಿ ಬೆಳಕಿಗೆ ಬರಬಹುದು. ಈ ಬಗ್ಗೆ ಸತ್ಯ ಹೊರಬರಬೇಕಾದರೆ ಮಂಗಳೂರು ಕಮಿಷನರೇಟ್
ವ್ಯಾಪ್ತಿಯ ಸಿ.ಸಿ ಕ್ಯಾಮರಾ ಫೂಟೇಜ್ ಗಳನ್ನು ತನಿಖೆಗೆ
ಒಳಪಡಿಸಬೇಕು ಎಂದು ಕಬೀರ್ ಉಳ್ಳಾಲ್ ಹೇಳಿದ್ದಾರೆ.

Latest Indian news

Popular Stories