ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ರೂ.250 ಏರಿಕೆ

0
587

ನವದೆಹಲಿ: 19 ಕೆ.ಜಿ ತೂಕದ ವಾಣಿಜ್ಯ ಬಳಕೆಯ ಅಡುಗೆ ಅನಿಲ ದರದಲ್ಲಿ ರೂ.250 ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಶುಕ್ರವಾರದಿಂದಲೇ ಜಾರಿಗೆ ಬರಲಿದೆ.

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಏರಿಕೆ ಕಂಡು ಬಂದಿಲ್ಲ. ಆದರೆ, ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿರುವ ಕಾರಣ ಇದೀಗ ಗ್ರಾಹಕರು 250 ಹೆಚ್ಚುವರಿ ಸೇರಿದಂತೆ 2,253 ರೂ. ಪಾವತಿ ಮಾಡಬೇಕಾಗಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 105 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಏರಿಕೆಯಾಗಿದೆ.

ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗಣನೀಯವಾದ ಹೆಚ್ಚಳ ಕಂಡು ಬರುತ್ತಿರುವ ಕಾರಣ ಅನಿಲ ಬೆಲೆ ಏರಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಅಡುಗೆ ಅನಿಲ ದರದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

ಈ ನಡುವೆ ಪೆಟ್ರೋಲ್ ಮತ್ತು ಡೀಸಲ್ ದರ ಕೂಡ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 107.30 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.27 ರೂಪಾಯಿ ದಾಖಲಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 115.42 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.58 ರೂಪಾಯಿ, ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 113.27 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 100.16 ರೂಪಾಯಿ ನಿಗದಿಯಾಗಿದೆ.

LEAVE A REPLY

Please enter your comment!
Please enter your name here