ವಿಟ್ಲದಲ್ಲಿ ಶೈಕ್ಷಣಿಕ ಕಾರ್ಯಾಗಾರಕ್ಕೆ ದಾಳಿ ನಡೆಸಿದ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಕ್ರಮಕೈಗೊಳ್ಳುವಂತೆ ಎಸ್‌ಐಒ ಆಗ್ರಹ

ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಶನ್ ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರದ ಮೇಲೆ ದಾಳಿ ನಡೆಸಿದ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವಂತೆ ಎಸ್‌ಐಒ ದಕ್ಷಿಣ ಕನ್ನಡ ಆಗ್ರಹಿಸಿದೆ.

ಕಾರ್ಯಾಗಾರದಲ್ಲಿ ಕೋಮುಗಲಭೆ ಪ್ರಚೋದಿಸುವ ಪ್ರಚೋದನಕಾರಿ ಮಾತನಾಡಲಾಗಿದೆ ಎಂಬ ಆರೋಪಗಳು ವಾಸ್ತವಕ್ಕೆ ದೂರವಾಗಿದ್ದು, ಸಮಾಜದಲ್ಲಿ ದ್ವೇಷ ಹರಡುವ ಪ್ರಯತ್ನದ ಭಾಗವಾಗಿ ದಾಳಿ ನಡೆಸಿದ್ದಾರೆ.
ಸಮಾಜೋನ್ನತಿಯ ಉದ್ದೇಶದಿಂದ ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ನಮ್ಮ ಸಂಪೂರ್ಣ ಬೆಂಬಲವಿದೆ.

ನ್ಯಾಯಯುತವಾದ ತನಿಖೆ ನಡೆಯಬೇಕು ಮತ್ತು ದಾಳಿ ಮಾಡಿದವರನ್ನು ಬಂಧಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಸಮಾಜದಲ್ಲಿ ಸುಳ್ಳು ಮಾಹಿತಿ ಮತ್ತು ದ್ವೇಷವನ್ನು ಹರಡುವ ಶಕ್ತಿಗಳನ್ನು ಸೋಲಿಸಲು ಮತ್ತು ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತವು ಕ್ರಮಕೈಗೊಳ್ಳಬೇಕು ಎಂದು ಎಸ್.ಐ.ಓ ದಕ್ಷಿಣ ಕನ್ನಡ ಆಗ್ರಹಿಸಿದೆ.

Latest Indian news

Popular Stories