ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ಮಾಡಿದ್ದ ಆರೋಪಿ ಶಂಕರ್ ಮಿಶ್ರಾ ಬಂಧನ

ಬೆಂಗಳೂರು: ಅಮೆರಿಕದಿಂದ ನವದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ಮಾಡಿದ ಪ್ರಕರಣದ ಆರೋಪಿ ಶಂಕರ್ ಮಿಶ್ರಾನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಸಂಜಯ ನಗರದ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದ ಶಂಕರ್ ಮಿಶ್ರಾನನ್ನು ಸಿಸಿಬಿ ಪೊಲೀಸರು ಬಂಧಿಸಿ ದೆಹಲಿ ಪೊಲೀಿಸರಿಗೆ ಹಸ್ತಾಂತರಿಸಿದ್ದಾರೆ.

ನವೆಂಬರ್ 27ರಂದು ಈ ಘಟನೆ ನಡೆದಿತ್ತು. ಮದ್ಯದ ಅಮಲಿನಲ್ಲಿದ್ದ ಆರೋಪಿ ಶಂಕರ್ ಮಿಶ್ರಾ ತಮ್ಬ ಬಳಿ ಕುಳಿತಿದ್ದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಎಂದು ಆರೋಪಿಸಲಾಗಿದೆ.

ಶಂಕರ್ ಮಿಶ್ರಾ ಅಮೆರಿಕ ಮೂಲದ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಭಾರತದಲ್ಲಿ ಆ ಸಂಸ್ಥೆಯ ಉಪಾಧ್ಯಕ್ಷರಾಗಿದ್ದಾರೆ. ಅತ್ಯುನ್ನತ ಶಿಕ್ಷಣ ಪಡೆದಿದ್ದರೂ ಮದ್ಯದ ಅಮಲಿನಲ್ಲಿ ಮಾಡಿದ ಹೀನ ಕೃತ್ಯಕ್ಕೆ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

Latest Indian news

Popular Stories