ನೇಪಾಳ: ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಪತನಗೊಂಡಿದ್ದ ಎಟಿಆರ್ 12 ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.
ಕಲ್ಮಂಡು ವಿಮಾನ ನಿಲ್ದಾಣದ ಅಧಿಕಾರಿ ಶೇರ್ ಬಹದ್ದೂರ್ ಠಾಕೂರ್ ಮಾತನಾಡಿ, ಇಂದು ವಿಮಾನ ಅಪಘಾತದ ತನಿಖೆ ಆರಂಭಿಸಿದ ಅಧಿಕಾರಿಗಳಿಗೆ ಅಪಘಾತ ಸ್ಥಳದ ಬಳಿ ಕಪ್ಪು ಪಟ್ಟಿಗೆ ಪತ್ತೆಯಾಗಿದೆ ಎಂದು ತಿಳಿಸಿದರು.
ಕಣ್ಮಂಡುವಿನಿಂದ ಪೂಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ ನಿನ್ನ ಪತನಗೊಂಡಿದೆ. ಇದುವರೆಗೆ 68 ಮೃತದೇಹಗಳನ್ನು ರಕ್ಷಣಾ ಕಾರ್ಯಕರ್ತರು ಹೊರತೆಗೆದಿದ್ದಾರೆ. ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿದಿಲ್ಲ ಎಂದು ಅಧಿಕಾರಿಗಳು ನಂಬಿದ್ದು, ಪರಿಹಾರ ಕಾರ್ಯಗಳು ಇನ್ನೂ ನಡೆಯುತ್ತಿವೆ.