ಅಬು ದುಬೈ: ಡೇವಿಡ್ ವಾರ್ನರ್ ಅಬ್ಬರ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ವೆಸ್ಟ್ ಇಂಡೀಸ್ 7 ವಿಕೆಟ್ ನಷ್ಟಕ್ಕೆ 157 ರನ್ ಬಾರಿಸಿತ್ತು. ವಿಂಡೀಸ್ ನೀಡಿದ 158 ರನ್ ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 16.2 ಓವರ್ ನಲ್ಲಿ 161 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ವಿಂಡೀಸ್ ಪರ ಗೇಯ್ಲ್ 15, ಲೆವಿಸ್ 29, ಹೆಟ್ಮೇರ್ 27, ಪೋರ್ಲಾಡ್ 44 ರನ್ ಬಾರಿಸಿದ್ದಾರೆ.
ಆಸ್ಟ್ರೇಲಿಯಾ ಪರ ಬೌಲಿಂಗ್ ನಲ್ಲಿ ಹೆಜಲ್ವುಡ್ 4, ಸ್ಟಾರ್ಕ್, ಪ್ಯಾಟ್ ಕಮಿನ್ಸ್ ಮತ್ತು ಆಡಂ ಜಂಪಾ ತಲಾ 1 ವಿಕೆಟ್ ಪಡೆದಿದ್ದಾರೆ.
ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಅಜೇಯ 89 ಮಿಚೆಲ್ ಮಾರ್ಶ್ 53 ರನ್ ಬಾರಿಸಿದ್ದಾರೆ.