ಚುನಾವಣೆಯ ಹೊಸ್ತಿಲಲ್ಲಿ ಶಾಂತಿಯನ್ನು ಕದಡಲು ಪ್ರಾರಂಭ..!!
ರಾಂಚಿ: ಶಿವರಾತ್ರಿ ಹಿನ್ನೆಲೆಯಲ್ಲಿ ಅನ್ಯ ಸಮುದಾಯದ ಪ್ರಾರ್ಥನಾ ಮಂದಿರದ ಬಳಿ ಸ್ವಾಗತ ಗೋಪುರ ನಿರ್ಮಾಣ ಹಿಂಸಾಚಾರಕ್ಕೆ ತಿರುಗಿದೆ. ಜಾರ್ಖಂಡ್ ನ ಪಲಾಮು ಸಮೀಪದ ಪಂಕಿ ಎಂಬಲ್ಲಿ ಈ ಘಟನೆ ವರದಿಯಾಗಿದೆ.
ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟ ನಡೆದಿದೆ. ಹಲವು ವಾಹನಗಳನ್ನು ಬೆಂಕಿ ಹಚ್ಚಿ ನಾಶಪಡಿಸಲಾಗಿದೆ.
ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಪ್ರದೇಶದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಶನಿವಾರ ದೇಶಾದ್ಯಂತ ಶಿವರಾತ್ರಿ ಆಚರಣೆಗೆ ಭರದ ಸಿದ್ದತೆ ನಡೆದಿರುವಂತೆಯೇ ಜಾರ್ಖಂಡ್ ನಲ್ಲಿ ಹಿಂಸಾಚಾರ ಭುಗಿಲೆದ್ದಿರುವುದು ಆತಂಕಕ್ಕೆ ಕಾರಣವಾಗಿದೆ….