ಶುಕ್ರವಾರ ಬೆಳಿಗ್ಗೆ 10.15ಕ್ಕೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶುಕ್ರವಾರ ಬೆಳಿಗ್ಗೆ 10.15ಕ್ಕೆ ರಾಜ್ಯ ವಿಧಾನಸಭೆಯಲ್ಲಿ ಮುಂಗಡ ಪತ್ರ ಮಂಡಿಸಲಿದ್ದಾರೆ. ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಸಿಎಂ ಪ್ರಕಟಿಸುವ ಸಾಧ್ಯತೆಯಿದೆ.

ವಿಧಾನಸಭೆಯ ಸ್ಪೀಕರ್ ಕಾಗೇರಿ ಬಜೆಟ್ ಮಂಡನೆಯ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ಮಧ್ಯಮ ವರ್ಗಕ್ಕೆ ಕೂಡ ಹಲವು ಘೋಷಣೆಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಅನಿಲ ದರ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಗೃಹಿಣಿಯರ ಮತ ಪಡೆಯಲು ಕೆಲವು ರಿಯಾಯಿತಿಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ರಾಜ್ಯದ ಎಲ್ಲೆಡೆ ಅನಿಲ ದರ ಹೆಚ್ಚಳಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Latest Indian news

Popular Stories