ಬೆಂಗಳೂರು/ಹುಬ್ಬಳ್ಳಿ: ಈ ಬಾರಿ ಹುಬ್ಬಳ್ಳಿ ಕೇಂದ್ರ ಟಿಕೆಟ್ ಜಗದೀಶ್ ಶೆಟ್ಟರ್(Jagadish shettar) ಬಿಜೆಪಿಗೆ ರಾಜೀನಾಮೆಯನ್ನು ಇಂದು ಅಧಿಕೃತವಾಗಿ ನೀಡಿದ್ದಾರೆ.
ಇನ್ನೊಂದೆಡೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ಯಾವ ಪಕ್ಷದಿಂದ ಸ್ಪರ್ಧೆ ಮಾಡುತ್ತಾರೆ? ಸ್ವಾತಂತ್ರ ಅಭ್ಯರ್ಥಿ ಆಗ್ತಾರೋ ಅಥವಾ ಕಾಂಗ್ರೆಸ್ ಸೇರುತ್ತಾರೋ? ಎನ್ನುವ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ನಡೆದಿವೆ.
ಈ ಹಿನ್ನೆಲೆಯಲ್ಲಿ ಶೆಟ್ಟರ್ ಅವರ ಮುಂದಿನ ರಾಜಕೀಯ ನಡೆ ತೀವ್ರ ಕುತೂಹಲ ಮೂಡಿಸಿದೆ. ಇನ್ನೊಂದೆಡೆ ಕಾಂಗ್ರೆಸ್ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕಸರತ್ತು ನಡೆಸಿದೆ. ಕಾಂಗ್ರೆಸ್ಗೆ ಬರುವಂತೆ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ನ ಪ್ರಮುಖ ನಾಯಕರು ಆಹ್ವಾನ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.