ಸಂಗೀತ ಲೋಕದ ಜೀವಂತ ದಂತಕಥೆ ಲತಾ ಮಂಗೇಶ್ಕರ್ ಗೆ ಕೊರೋನಾ ಪಾಸಿಟಿವ್; ಆಸ್ಪತ್ರೆಗೆ ದಾಖಲು

ಮುಂಬೈ: ಗಾನಕೋಗಿಲೆ, ಜೀವಂತ ದಂತಕಥೆ ಲತಾ ಮಂಗೇಶ್ವರ್ (Lata Mangeshkar) ಅವರಿಗೆ ಕೊರೋನಾ ಪಾಸಿಟಿವ್ (Covid-19) ಬಂದಿದೆ. 92 ವರ್ಷದ ಲತಾ ಮಂಗೇಶ್ಕರ್ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮುಂಬೈಯ ಬ್ರೀಚಿ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ವಯಸ್ಸಿನ ಕಾರಣ ವೈದ್ಯರು ಐಸಿಯು ವಿಭಾಗದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಕೊರೋನಾ ಸೋಂಕಿನ ಸೌಮ್ಯ ಲಕ್ಷಣಗಳಿದ್ದು ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ. ಅವರ ವಯಸ್ಸಿನ ಕಾರಣ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಭಿಮಾನಿಗಳು ಆತಂಕಕ್ಕೆ ಒಳಗಾಗಬೇಕಿಲ್ಲ, ಈ ಸಂದರ್ಭದಲ್ಲಿ ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸಿ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿ ಎಂದು ಅವರ ಸೋದರ ಸೊಸೆ ರಚನಾ ಕೋರಿಕೊಂಡಿದ್ದಾರೆ.

2019ರಲ್ಲಿ ಹೃದಯ ಸೋಂಕಿಗೆ ಒಳಗಾಗಿ ಇದೇ ಆಸ್ಪತ್ರೆಗೆ ಲತಾ ಮಂಗೇಶ್ಕರ್ ದಾಖಲಾಗಿದ್ದರು.ನಂತರ ಅವರು ಸೋಂಕಿನಿಂದ ಗುಣಮುಖರಾಗಿದ್ದರು.

ಭಾರತೀಯ ಚಿತ್ರರಂಗದ ಶ್ರೇಷ್ಠ ಹಿನ್ನೆಲೆ ಗಾಯಕಿಯರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಲತಾ ಮಂಗೇಶ್ಕರ್ ಅವರು 2001 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ ಸನ್ಮಾನಕ್ಕೆ ಭಾಜನರಾಗಿದ್ದರು. ಲತಾ ಮಂಗೇಶ್ಕರ್ ಅವರು ಪದ್ಮಭೂಷಣ, ಪದ್ಮವಿಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಹಲವು ಸನ್ಮಾನ, ಪ್ರಶಸ್ತಿ, ಗೌರವಗಳನ್ನು ಸ್ವೀಕರಿಸಿದ್ದಾರೆ.

Latest Indian news

Popular Stories

error: Content is protected !!