ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಸಜ್ಜಾಗಿದೆ ಚಂದ್ರಯಾನ-3 ನೌಕೆ

ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ನೌಕೆ ಬುಧವಾರ ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಸಜ್ಜಾಗಿದ್ದು, ಈ ಐತಿಹಾಸಿಕ ಸಂದರ್ಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ಇದು ಚಂದ್ರನ ದಕ್ಷಿಣ ಧೃವವನ್ನು ತಲುಪಲಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಗುರುತಿಸಿಕೊಳ್ಳಲಿದೆ.

ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ ಮಾನವನ ಜಾಣ್ಮೆ ಮತ್ತು ನಿರ್ಣಯಕ್ಕೆ ಸಾಕ್ಷಿಯಾಗಿದೆ. ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಗ್ಯಾನ್ ಒಳಗೊಂಡಿರುವ LM, ಚಂದ್ರನ ಭೂಪ್ರದೇಶದಲ್ಲಿ ಅತ್ಯಂತ ಸುರಕ್ಷಿತವಾಗಿ ಹಗುರವಾಗಿ ಚಂದ್ರನ ನೆಲವನ್ನು ಸ್ಪರ್ಶಿಸುವ ಮೂಲಕ ಇತಿಹಾಸ ನಿರ್ಮಿಸಲು ಸಿದ್ಧವಾಗಿದೆ. ಬುಧವಾರ ಸಂಜೆ ಅಂದೆ ಇಂದು ಸರಿಯಾಗಿ ಸಂಜೆ 6:04 ನಿಮಿಷಕ್ಕೆ ವಿಕ್ರಮ್​ ಲ್ಯಾಂಡರ್​ ಲ್ಯಾಂಡ್​ ಆಗಲಿದೆ.

ವಿಕ್ರಂ ಸುರಕ್ಷಿತವಾಗಿ ಚಂದಪ್ಪನ ಅಂಗಳವನ್ನ ತಲುಪಿದರೆ ವಿಶ್ವದಲ್ಲಿ ವಿಕ್ರಮ ಸ್ಥಾಪಿಸಿದ ಗರಿಮೆ ಇಸ್ರೋ ಪಾಲಿಗೆ ಒದಗಿ ಬರಲಿದೆ. ಚಂದ್ರಯಾನ-3 ರ ಲ್ಯಾಂಡಿಂಗ್ ಭಾರತಕ್ಕೆ ಐತಿಹಾಸಿಕ ಮೈಲಿಗಲ್ಲಾಗಲಿದೆ. ಏಕೆಂದರೆ ಇದು ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್‌ನ ಸಂಕೀರ್ಣ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡ ನಾಲ್ಕನೇ ರಾಷ್ಟ್ರವಾಗಿ ಗುರುತಿಸಿಕೊಳ್ಳಲಿದೆ. ಅಮೆರಿಕ, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟಗಳ ಸಾಧನೆಯ ಶ್ರೇಣಿಗೆ ಸೇರಲಿದೆ. ಈ ಮೂಲಕ ಭಾರತ ಬಾಹ್ಯಾಕಾಶ ಪರಿಶೋಧನೆಯಲ್ಲಿ ವಿಕ್ರಮ ಸಾಧಿಸಿದ ಶ್ರೇಷ್ಠತೆಗೆ ಒಳಗಾಗಲಿದೆ.

Latest Indian news

Popular Stories