ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಿ: ಕವಟಗಿ

ವಿಜಯಪುರ : ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು, ಮನೆ ಮನೆಗೆ ಹೋಗಿ ನಮ್ಮ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಮೂಲಕ ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ ನೀಡುವಂತೆ ಮನವರಿಕೆ ಮಾಡಬೇಕು ಎಂದು ಬೆಳಗಾವಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಕವಟಗಿ ಕರೆ ನೀಡಿದ್ದಾರೆ.

ನಗರದ ಸಾಯಿ ಮಂಗಳ ಕಾರ್ಯಾಲಯದಲ್ಲಿ ನಡೆದ ಭಾರತೀಯ ಜನತಾ ಪಕ್ಷದಿಂದ ಚುನಾವಣಾ ನಿರ್ವಾಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅನೇಕ ಜನಪ್ರಿಯ ಯೋಜನೆಗಳನ್ನು ನೀಡಿದ್ದಾರೆ. ಅವುಗಳನ್ನು ಮನೆಮನೆಗೆ ತಲುಪಿಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ, ಇದನ್ನು ಸರಿಯಾಗಿ ನಿಭಾಯಿಸಬೇಕು ಎಂದು ಕರೆ ನೀಡಿದರು.

ಪಕ್ಷದ ಅಭ್ಯರ್ಥಿಗಳು ಯಾರೇ ಆಗಲಿ ನಮ್ಮ ಗುರಿ ಅಭ್ಯರ್ಥಿಗಳನ್ನು ಗೆಲ್ಲಿಸುವುದು, ಯಾವುದೇ ಕ್ಷೇತ್ರದಲ್ಲಿ ಬಂಡಾಯ ಏಳದಂತೆ ತಡೆಯುವ ಮಹತ್ವದ ಜವಾಬ್ದಾರಿಯನ್ನು ಕಾರ್ಯಕರ್ತರು ನಿರ್ವಹಿಸಬೇಕು ಎಂದು ಚಂದ್ರಶೇಖರ ಕವಟಗಿ ಹೇಳಿದರು.

ಇದೇವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಈ ಬಾರಿ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನವಾಗುವಂತೆ ನೋಡಿಕೊಳ್ಳಬೇಕು, ಪ್ರತಿಯೊಂದು ಬೂತ್ ನಲ್ಲಿಯೂ ಪಕ್ಷವನ್ನು ಸಂಘಟಿಸುವ ಹಾಗೂ ಸರಕಾರದ ಸಾಧನೆಗಳನ್ನು ಜನರ ಬಳಿಗೆ ಒಯ್ಯುವ, ಹಾಗೂ ಅದರ ಬಗ್ಗೆ ಸಂಪೂರ್ಣವಾಗಿ ಮಾಹಿತಿ ನೀಡುವ ಕೆಲಸವಾಗಬೇಕು ಎಂದರು. ಅಲ್ಲದೇ ಭವಿಷ್ಯದಲ್ಲಿ ಇಡೀ ಜಗತ್ತಿಗೆ ಭಾರತ ದೇಶವು ದೊಡ್ಡಣ್ಣನಂತೆ ನಿಲ್ಲಲಿದ್ದು, ನಾವೆಲ್ಲ ತಲೆ ಎತ್ತಿ ಬಾಳುತ್ತೇವೆ ಇಡಕ್ಮೆ ಮತದಾರರ ಸಹಾಕಾರ ಅತ್ಯಗತ್ಯವಾದದು ಎಂಬುದನ್ನು ಮನವರಿಕೆ ಮಾಡಬೇಕು ಎಂದು ಹೇಳಿದರು.

ಯುವಕರೇ ಭಾರತ ದೇಶದ ಮುಂದಿನ ಭವಿಷ್ಯ, ಯುವಕರಿಗೆ ಯಾವುದೇ ರೀತಿಯ ಆಸೆ, ಆಮಿಷಗಳನ್ನು ಒಡ್ಡದೇ, ನಮ್ಮ ಸರಕಾರದ ಸಾಧನೆಯ ಮುಖಾಂತರ ಮತ ಕೇಳಬೇಕು ಎಂಸು ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಕರೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಸಂಪನ್ಮೂಲ ವ್ಯಕ್ತಿಗಳು ಈ ಚುನಾವಣೆಯಲ್ಲಿ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಮಾಡಬಹುದಾದ ಕೆಲಸಗಳ ಬಗ್ಗೆ ಮಾಹಿತಿ ಹಾಗೂ ಅರಿವು ಮೂಡಿಸಿದರು.

ಈ ಸಭೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣಸಾ ಬಾಂಡಗೆ, ಶಿವರುದ್ರ ಬಾಗಲಕೋಟ, ವಿಜಯ ಜೋಶಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Latest Indian news

Popular Stories