ಕಾಂಗ್ರೆಸ್ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬಗ್ಗೆ ಒಲವು ಹೊಂದಿರುವವರ ಮೇಲೆ ದಾಳಿ ಮಾಡಿ ಬೆದರಿಸಲು ಕೇಂದ್ರ ಸರ್ಕಾರ ಸಾವಿರಕ್ಕೂ ಹೆಚ್ಚು ಐ.ಟಿ, ಇ.ಡಿ ಮತ್ತು ಸಿಬಿಐ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ ಬಿಜೆಪಿ ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ.
ಬಿಜೆಪಿ ಸರ್ಕಾರದ ಈ ಷಡ್ಯಂತ್ರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹೋರಾಟದ ಮೂಲಕವೇ ಬಿಜೆಪಿಯ ಈ ದಮನಕಾರ್ಯವನ್ನು ಎದುರಿಸುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಭೀತಿಗೀಡಾಗದೆ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕು ಎಂದು ಕರೆ ನೀಡಿದ್ದಾರೆ.