ಸಿದ್ದರಾಮಯ್ಯ, ಮಮತಾ ಬ್ಯಾನರ್ಜಿ ಕುರಿತು ಅವಹೇಳನಕಾರಿ ಪೋಸ್ಟ್ – ಎಫ್.ಐ.ಆರ್

ಬೆಂಗಳೂರು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ ಹಾಕಿದ್ದ ವ್ಯಕ್ತಿಯೋರ್ವನ ವಿರುದ್ಧ ಸೈಬರ್ ಕ್ರೈಮ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 

ಆರೋಪಿಯನ್ನು ಈಶ್ವರಪ್ಪ ಮುನಿಯಪ್ಪ ಎಂದು ಗುರುತು ಮಾಡಲಾಗಿದ್ದು, ಆತನಿಗಾಗಿ ಶೋಧಕಾರ್ಯಾಚರಣೆ ನಡೆದಿದೆ. 

ಈ ಆರೋಪಿ ಗಣ್ಯರ ವಿರುದ್ಧ ಸರಣಿ ನಿಂದನಾತ್ಮಕ ಹಾಗೂ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಹಾಕುತ್ತಿದ್ದ. ಸಿಎಂ ಅಷ್ಟೇ ಅಲ್ಲದೇ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವ ಪ್ರಿಯಾಂಕ್ ಖರ್ಗೆ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಬಗ್ಗೆಯೂ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಹಾಕುತ್ತಿದ್ದ ಎಂದು ತಿಳಿದುಬಂದಿದೆ. 

ಆರೋಪಿ ಸಿಎಂ ಸಿದ್ದರಾಮಯ್ಯ, ಶಿವಕುಮಾರ್ ಮಾಡಿದ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ ಮತ್ತು ಅವರ ಮೇಲೆ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಟ್‌ಫೀಲ್ಡ್ ಸೈಬರ್ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಮ್ (ಸಿಇಎನ್) ಪೊಲೀಸ್ ಠಾಣೆ ಪೊಲೀಸರು ಆತನ ವಿರುದ್ಧ ದೂರು ದಾಖಲಿಸಿಕೊಂಡು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

Latest Indian news

Popular Stories