ಶ್ರೀನಗರ: ಬಸ್ಸೊಂದು ಕಣಿವೆಗೆ ಉರುಳಿ ಬಿದ್ದು ಮಹಿಳೆ ಸೇರಿ ಐವರು ಸಾವನ್ನಪ್ಪಿದ್ದು, 15 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದಿದೆ.
ಬಿಲಾವರ್ ನ ಧನು ಪರೋಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಾಹನವು ಕೌಗ್ ನಿಂದ ಧನು ಪರೋಲೆಗೆ ತೆರಳುತ್ತಿತ್ತು. ಈ ವೇಳೆ ಸ್ಕಿಡ್ ಆಗಿ ಕಣಿವೆಗೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡಿದ್ದ ಒಬ್ಬರು ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಮೃತರನ್ನು ಬಂಟು, ಹನ್ಸ್ ರಾಜ್, ಅಜೀತ್ ಸಿಂಗ್, ಅಮ್ರೂ ಮತ್ತು ಕಾಕು ರಾಮ್ ಎಂದು ಗುರುತಿಸಲಾಗಿದೆ.ಗಾಯಗೊಂಡಿರುವ 15 ಮಂದಿ ಪ್ರಯಾಣಿಕರನ್ನು ಬಿಲಾವರ್ ಉಪ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.