ಹಾಸನ: ‘ಪ್ರಜಾಧ್ವನಿ ಯಾತ್ರೆ’ ಮೂಲಕ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತವರು ಜಿಲ್ಲೆ ಹಾಸನ ತಮ್ಮ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ನಾಯಕರು ತುದಿಗಾಲಲ್ಲಿ ನಿಂತಿದ್ದಾರೆ.
ಅರಕಲಗೂಡು ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಕೃಷ್ಣೇಗೌಡ, ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ಬನವಾಸೆ ರಂಗಸ್ವಾಮಿ, ಬಾಗೂರು ಮಂಜೇಗೌಡ, ಬೇಲೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಬಿ.ಶಿವರಾಮು ಅವರ ಅಪಾರ ಬೆಂಬಲಿಗರು ರ್ಯಾಲಿಗೆ ಆಗಮಿಸುವ ನಿರೀಕ್ಷೆಯಿದೆ.
ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಬೆಂಗಳೂರು (ಗ್ರಾಮಾಂತರ) ಸಂಸದ ಡಿ.ಕೆ.ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ್ ಎರಡು ಬಾರಿ ಹಾಸನಕ್ಕೆ ಭೇಟಿ ನೀಡಿ ಹಿರಿಯ ಮುಖಂಡರು, ಟಿಕೆಟ್ ಆಕಾಂಕ್ಷಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ‘ಪ್ರಜಾಧ್ವನಿ ಯಾತ್ರೆ’ ಯಶಸ್ವಿಗೆ ಶ್ರಮಿಸುವಂತೆ ಸೂಚಿಸಿದ್ದಾರೆ.
ಕುತೂಹಲದ ಸಂಗತಿಯೆಂದರೆ, ಯಾತ್ರೆಗೆ ಹೆಚ್ಚಿನ ಕಾರ್ಯಕರ್ತರನ್ನು ಕರೆತರುವ ಮೂಲಕ ಹಿರಿಯ ನಾಯಕರ ಮುಂದೆ ತಮ್ಮ ಶಕ್ತಿ ಪ್ರದರ್ಶಿಸಲು ಟಿಕೆಟ್ ಆಕಾಂಕ್ಷಿಗಳ ನಡುವೆ ಪೈಪೋಟಿ ಇದೆ.
ಹಾಸನ ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಲ್ಲಿ ವಿವಿಧ ನಾಯಕರ ಬ್ಯಾನರ್, ಬಂಟಿಂಗ್ಸ್ ಮತ್ತು ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ದ್ರುವನಾರಾಯಣ್ ಸೇರಿದಂತೆ ಮಾಜಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹೆಚ್.ಎಂ.ರೇವಣ್ಣ ಸೇರಿದಂತೆ ಹತ್ತಾರು ಕಾಂಗ್ರೆಸ್ ಮುಖಂಡರು ಹಾಸನ ಜಿಲ್ಲೆಯಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಮುಖಂಡರು ಭಾಷಣ ಮಾಡುವಾಗ ಶಿಸ್ತು ಕಾಯ್ದುಕೊಳ್ಳುವಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಟಿಕೆಟ್ ಆಕಾಂಕ್ಷಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖಂಡರು ವೇದಿಕೆಗೆ ಆಗಮಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ತಮ್ಮ ಪರವಾಗಿ ಘೋಷಣೆಗಳನ್ನು ಮಾಡದಂತೆ ಟಿಕೆಟ್ ಆಕಾಂಕ್ಷಿಗಳಿಗೆ ಸೂಚಿಸಲಾಗಿದೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ[ಡಿಸಿಸಿ] ನೂತನ ಅಧ್ಯಕ್ಷ ಇ.ಎಚ್.ಲಕ್ಷ್ಮಣ್ ‘ಇತಿಹಾಸ ನಿರ್ಮಿಸುವ ‘ಪ್ರಜಾಧ್ವನಿ ಯಾತ್ರೆ’ಗೆ ಡಿಸಿಸಿ ಒಂದು ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆಯಿದೆ. ಮುಂಬರುವ ವಿಧಾನಸಭಾ ಚುನಾವಣೆಯ ಮುನ್ನ ಈ ಯಾತ್ರೆ ಮಹತ್ವದ್ದಾಗಿದೆ.