ಹುಬ್ಬಳ್ಳಿ: ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಮೃತ್ಯು

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ.

ಕಾರಿಗೆ ಟ್ಯಾಂಕರ್​ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಹುಬ್ಬಳ್ಳಿ ನಗರದ ನಿವಾಸಿಗಳಾದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. 

ಆರು ಜನ ಸ್ನೇಹಿತರು ಕಾರಿನಲ್ಲಿ ದೇವರ ದರ್ಶನಕ್ಕೆಂದು ಕಾರವಾರಕ್ಕೆ ತೆರಳುತ್ತಿದ್ದರು. ಈ ವೇಳೆ ಕಲಘಟಗಿ ಬಳಿ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಕಿಮ್ಸ್‌ ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

Latest Indian news

Popular Stories