ಹೆಬ್ರಿ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ತೆಂಗಿನ‌ ಮರಕ್ಕೆ ಹತ್ತಿ ತೆಂಗಿನ ಕಾಯಿ ಕೊಯ್ಯುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ‌ ತಾಲೂಕಿನ ಅಲ್ಬಾಡಿ ಗ್ರಾಮದ ಕೊಂಜಾಡಿ ಎಂಬಲ್ಲಿ ಜ.26ರಂದು ನಡೆದಿದೆ.


ಮೃತರನ್ನು ಕುಚ್ಚೂರು ಗ್ರಾಮದ ನಿವಾಸಿ 43 ವರ್ಷದ ಚನ್ನಕೇಶವ ಎಂದು ಗುರುತಿಸಲಾಗಿದೆ. ಇವರು ನಿನ್ನೆ ಬೆಳಿಗ್ಗೆ ಕೊಂಜಾಡಿ ರಾಜೀವ ಶೆಟ್ಟಿ ಅವರ ತೆಂಗಿನ ತೋಟದಲ್ಲಿ ತೆಂಗಿನ ಕಾಯಿ ಕೊಯ್ಯುವ ಕೆಲಸಕ್ಕೆ ಹೋಗಿದ್ರು. ತೆಂಗಿನ ಮರ ಹತ್ತಿ ಕಾಯಿ ಕೊಯ್ಯುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ತಕ್ಷಣವೇ ಅವರನ್ನು ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರಿಕ್ಷೀಸಿದ ವೈದ್ಯರು ಚನ್ನಕೇಶವ ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories